ಬಳ್ಳಾರಿ

ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಮತದಾರರು ತನ್ನ ಹಕ್ಕನ್ನು ಚಲಾಯಿಸಲು ಸಲುವಾಗಿ ಏ.23ರಂದು ಎಲ್ಲಾ ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮತದಾನ ದಿನವಾದ ಏ.23 ರಂದು ಜಿಲ್ಲೆಯಾದ್ಯಂತ ಎಲ್ಲಾ ಖಾಸಗಿ ರಂಗದ ಉದ್ದಿಮೆದಾರರು, ಪ್ಲಾಂಟೇಶನ್ ಮಾಲೀಕರು, ರೆಸ್ಟೋರೆಂಟ್ ಮತ್ತು ರೆಸಾರ್ಟ್ ಮಾಲೀಕರು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ) ರಡಿಯಲ್ಲಿ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಸಂಸ್ಥೆ/ನಿಯೋಜಕರು ಅವಕಾಶ ಮಾಡಿಕೊಡಲಾಗಿದೆ.
ಈ ವಿಷಯದಲ್ಲಿ ಕಾರ್ಮಿಕರಿಗೆ ಸಂವಿಧಾನಾತ್ಮಕ /ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ರಜೆ ನೀಡದೇ ಹಾಗೂ ಮತದಾನಕ್ಕೆ ಅವಕಾಶ ಮಾಡಿಕೊಡದಿದ್ದಲ್ಲಿ ಅಂತಹ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳ ವಿರುದ್ಧ 1963 ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ರಜಾ ದಿನಗಳು) ಕಾಯ್ದೆಯ ಕಲಂ-3ಎ ಹಾಗೂ 1951ರ ಪ್ರಜಾ ಪ್ರಾತಿನಿಧ್ಯ ಕಾಯ್ದೆಯ ಕಲಂ135(ಬಿ)ರ ಉಲ್ಲಂಘನೆಗಳಿಗಾಗಿ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
