ಚಿತ್ರದುರ್ಗ;
ಕಳೆದ ಮೂವತೈದು ವರ್ಷಗಳಿಂದ ವಿವಿಧ ಸಂಘಟನೆಯಲ್ಲಿ ಕೆಲಸ ಮಾಡಿದ್ದೇನೆ. ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿಯೂ ಉತ್ತಮ ಕೆಲಸ ಮಾಡಿದ್ದೇನೆ. ನನ್ನ ಅವಧಿಯಲ್ಲಿ ಯಾವುದೇ ಲೋಪವಾಗದಂತೆ ಆಡಳಿತ ನಡೆಸಿದ್ದೇನೆ. ಈ ಬಾರಿಯೂ ಗೆದ್ದರೆ ನೌಕರರ ಶ್ರೇಯಸ್ಸಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸ್ಥಾನದ ಅಭ್ಯರ್ಥಿ ಹೆಚ್.ಕೆ.ರಾಮು ಹೇಳಿದ್ದಾರೆ
ಚಿತ್ರದುರ್ಗದ ಜಿಲ್ಲಾ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಪದಾಧಿಕಾರಿಗಳು ಹಾಗೂ ಮತದಾರರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಅವಧಿಯಲ್ಲಿ ನಾನು ಆತ್ಮಸಾಕ್ಷಿಯಂತೆ ಕೆಲಸ ಮಾಡಿದ್ದೇನೆ. ನೌಕರರಿಗೆ ನ್ಯಾಯ ಕಲ್ಪಿಸಿಕೊಡಲು ನಾನಾ ರೀತಿಯಲ್ಲಿಯೂ ಶ್ರಮಿಸಿರುವುದಾಗಿಯೂ ಹೇಳಿದರು
ಸರ್ಕಾರಿ ನೌಕರರ ಸಂಘದಲ್ಲಿ ನಾಲ್ಕು ಬಾರಿ ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕೆಲಸ ಮಾಡಿದ್ದೇನೆ. ಜೊತೆಗೆ ವಿವಿಧ ಸಂಘಟನೆಗಳಲ್ಲಿಯೂ ಸೇವೆ ಮಾಡಿದ್ದೇನೆ. ರಾಜ್ಯ ಸಂಘದ ಅಡಳಿತವನ್ನು ಅತ್ಯಂತ ಪಾರದರ್ಶಕವಾಗಿ ಮುನ್ನಡೆಸಿದ್ದೇನೆ. ಈ ಸಂಘ ಸರ್ವರ ಸ್ವತ್ತು. ಎಲ್ಲರ ಅಭಿಪ್ರಾಯಗಳಿಗೆ ಮನ್ನಣೆ ಸಿಗಬೇಕು ಎನ್ನುವುದು ನನ್ನ ಅಭಿಪ್ರಾಯ. ಬರುವ ದಿನಗಳಲ್ಲಿಯೂ ಸಂಘದ ಬೈಲಾ ತಿದ್ದುಪಡಿ ಮಾಡಿ ನೌಕರರ ಹಿತಕ್ಕಾಗಿ ಕೆಲವು ಬದಲಾವಣೆ ತರಲಾಗುವುದು ಎಂದು ಭರವಸೆ ನೀಡಿದರು
ರಾಜ್ಯದ ವಿವಿಧ ಇಲಾಖೆಗಳಲ್ಲಿ ಸುಮಾರು2.50 ಲಕ್ಷ ಖಾಲಿ ಹುದ್ದೆಗಳಿದ್ದು, ಸರ್ಕಾರ ಭರ್ತಿ ಮಾಡಬೇಕಿದೆ. ಕೇಂದ್ರ ಸರ್ಕಾರದ ನೌಕರರಿಗೆ ಸಿಗುವ ಎಲ್ಲಾ ಬಗೆಯ ಸೌಲಬ್ಯಗಳು ರಾಜ್ಯ ಸರ್ಕಾರಿ ನೌಕರರಿಗೂ ಸಿಗಬೇಕು ಅದಕ್ಕಾಗಿ ಹೋರಾಟ ಮಾಡಲಾಗುವುದು ಎಂದು ಹೆಚ್.ಕೆ.ರಾಮು ಹೇಳಿದರು
ರಾಮನಗರ ಜಿಲ್ಲಾ ಸಂಘದ ಅಧ್ಯಕ್ಷ ಭೈರಲಿಂಗೇಗೌಡ ಮಾತನಾಡಿ, ಹಿರಿಯರ ಅನುಭವದೊಂದಿಗೆ ಸಂಘವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸುವ ಸಾಮಥ್ರ್ಯ ಹೆಚ್.ಕೆ.ರಾಮು ಅವರಲ್ಲಿದೆ. ಆರೋಪ, ಪ್ರತ್ಯಾರೋಪಗಳ ಬಗ್ಗೆ ಯಾರೂ ತಲೆ ಕೆಡಿಸಿಕೊಳ್ಳದೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ಬಗ್ಗೆ ಯೋಚನೆ ಮಾಡಬೇಕು. ಎಲ್ಲರೂ ಕೂಡಿ ಗೆಲುವಿಗೆ ಶ್ರಮಿಸಬೇಕು ಎಂದರು
ಚಿತ್ರದುರ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಜಿ.ಜಗದೀಶ್ ಮಾತನಾಡಿ, ಚಿತ್ರದುರ್ಗ ಜಿಲ್ಲೆಯಲ್ಲಿ ಸಂಘಟನೆಯನ್ನು ಮಾದರಿಯಾಗಿ ಕಟ್ಟಿದ್ದೇವೆ. ಈ ಚುನಾವಣೆಯಲ್ಲಿ ಎಲ್ಲರೂ ಒಗ್ಗೂಡಿ ಗೆಲುವು ತಂದುಕೊಡುವುದು ನಮ್ಮ ಕರ್ತವ್ಯ. ಅದಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ ಎಂದರು
ರಾಜ್ಯ ಖಜಾಂಚಿ ಸ್ಥಾನಕ್ಕೆ ಸ್ಪರ್ದಿಸಿರುವ ಡಾ.ಸಿದ್ದರಾಮಣ್ಣ ಮಾತನಾಡಿ, ನಾನೂ ಇದೇ ಜಿಲ್ಲೆಯವನಾಗಿದ್ದು, ಈ ಬಾರಿ ಅವಕಾಶ ಸಿಕ್ಕಿದೆ. ಅದಕ್ಕಾಗಿ ಎಲ್ಲರೂ ಮತ ನೀಡಿ ಬೆಂಬಲಿಸಬೇಕು ಎಂದು ಮನವಿ ಮಾಡಿದರು ಸಭೆಯಲ್ಲಿ ರಾಜ್ಯ ಪರಿಷತ್ ಸದಸ್ಯ ತಿಮ್ಮಾರೆಡ್ಡಿ, ಸೂರ್ಯನಾರಾಯಣ, ಕೃಷ್ಣಪ್ಪ, ಡಿ.ಟಿ.ಜಗನ್ನಾಥ್ ಇನ್ನಿತರರು ಹಾಜರಿದ್ದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
