ನವದೆಹಲಿ
ಸೈನಿಕ್ ಶಾಲೆಗಳಲ್ಲಿ ಹೆಣ್ಣು ಮಕ್ಕಳ ಪ್ರವೇಶಕ್ಕೆ ಅವಕಾಶ ನೀಡುವ ಪ್ರಸ್ತಾಪಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅನುಮೋದನೆ ನೀಡಿದ್ದಾರೆ.ಎರಡು ವರ್ಷಗಳ ಹಿಂದೆ ಮಿಜೋರಾಂನ ಸೈನಿಕ್ ಸ್ಕೂಲ್ ಚಿಂಗ್ಶಿಪ್ನಲ್ಲಿ ಹೆಣ್ಣು ಮಕ್ಕಳನ್ನು ಪ್ರವೇಶಿಸಲು ರಕ್ಷಣಾ ಸಚಿವಾಲಯ ಪ್ರಾರಂಭಿಸಿದ ಪ್ರಾಯೋಗಿಕ ಯೋಜನೆಯ ಯಶಸ್ಸಿನ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವಾಲಯ ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದೆ.
ನಿರ್ದೇಶನವನ್ನು ಸುಗಮವಾಗಿ ಅನುಷ್ಠಾನಗೊಳಿಸಲು ಸೈನಿಕ್ ಶಾಲೆಗಳಲ್ಲಿ ಅಗತ್ಯ ಮೂಲಸೌಕರ್ಯಗಳ ಲಭ್ಯತೆ ಮತ್ತು ಸಾಕಷ್ಟು ಮಹಿಳಾ ಸಿಬ್ಬಂದಿಯನ್ನು ಖಚಿತಪಡಿಸಿಕೊಳ್ಳಲು ರಾಜನಾಥ್ ಸಿಂಗ್ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.ಈ ನಿರ್ಧಾರವು ಹೆಚ್ಚಿನ ಒಳಗೊಳ್ಳುವಿಕೆ, ಲಿಂಗ ಸಮಾನತೆ, ಸಶಸ್ತ್ರ ಪಡೆಗಳಲ್ಲಿ ಮಹಿಳೆಯರ ಹೆಚ್ಚಿನ ಭಾಗವಹಿಸುವಿಕೆಗೆ ಅನುವು ನೀಡಲಿದೆ.ಅಂತೆಯೇ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಮಾಡಿದ ಬೇಟಿ ಬಚಾವೊ ಬೇಟಿ ಪದಾವೊ ಧ್ಯೇಯವಾಕ್ಯವನ್ನು ಬಲಪಡಿಸುವ ಸರ್ಕಾರದ ಉದ್ದೇಶಕ್ಕೆ ಅನುಗುಣವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
