ಬಾಲಕಿಗೆ ಹೈಟೆನ್ಷನ್ ವೈರ್ ತಗುಲಿ ಗಂಭೀರ ಗಾಯ..!!

ಬೆಂಗಳೂರು

     ಮನೆಯ ಮೇಲೆ ಕುಳಿತು ಕ್ರಿಕೆಟ್ ಪಂದ್ಯ ವೀಕ್ಷಿಸುತ್ತಿದ್ದ ಬಾಲಕಿಯೊಬ್ಬಳು ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಗಂಭೀರ ವಾಗಿ ಗಾಯಗೊಂಡಿರುವ ದುರ್ಘಟನೆ ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಿಂಗಾಪುರದಲ್ಲಿ ನಡೆದಿದೆ .ಲಿಂಗಾಪುರದ ಬಾಲಕಿ ಕೌಸಲ್ಯ (13) ವಿದ್ಯುತ್ ತಂತಿ ತಗುಲಿ ಬೆರಳು ಕತ್ತರಿಸಿ ದೇಹದ ಶೇ. 70 ರಷ್ಟು ಸುಟ್ಟಗಾಯಗಳಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ.

     ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿರುವುದನ್ನು ಮನೆಯ ಮೇಲೆ ಕುಳಿತು ನೋಡುತ್ತಿದ್ದ ವೇಳೆ ಹತ್ತಿರದಲ್ಲೇ ಹಾದುಹೋಗಿದ್ದ 11 ಕೆ.ವಿ. ವಿದ್ಯುತ್ ತಂತಿ ತಗುಲಿ ಗಾಯಗೊಂಡಿದ್ದಾಳೆ. ಅಸ್ವಸ್ಥಳಾದ ಆಕೆಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಬೆಸ್ಕಾಂ ನಿರ್ಲಕ್ಷ್ಯದಿಂದಾಗಿ ಈ ಘಟನೆ ಸಂಭವಿಸಿದ್ದು, ಪೋಷಕರ ಆಕ್ರಂಧನ ಮುಗಿಲುಮುಟ್ಟಿದೆ. ಲಿಂಗಾಪುರದಲ್ಲಿ ಮನೆಗಳ ಬಳಿಯೇ 11 ಕೆ.ವಿ. ವಿದ್ಯುತ್ ತಂತಿ ಹಾದುಹೋಗಿದ್ದು, ಅದನ್ನು ತೆರವುಗೊಳಿಸಲು ಬೆಸ್ಕಾಂ ಅಧಿಕಾರಿಗಳು ಮುಂದಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ..

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ