ಚಿತ್ರದುರ್ಗ
ಕೆರೆ ಹೂಳು ಅಭಿವೃದ್ದಿಪಡಿಸಿ ಕೆರೆ ಮಣ್ಣುನ್ನು ಉಚಿತವಾಗಿ ನೀಡಬೇಕು ಎಂದು ಒತ್ತಾಯಿಸಿ ಶನಿವಾರ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಕೆರೆಯನ್ನು ಕೆಲವು ಕಡೆಗಳಲ್ಲಿ ಒತ್ತುವರಿ ಮಾಡಿಕೊಳ್ಳಲಾಗಿದೆ. ಅಲ್ಲದೆ ಜಾಲಿಗಿಡಗಳು ಮುಳ್ಳು ಬೆಳೆದು ಹಾಳಾಗಿದೆ. ಮೊದಲು ಹೂಳೆತ್ತಿ ನಂತರ ಕೆರೆ ಒತ್ತುವರಿ ತೆರವುಗೊಳಿಸಬೇಕು. ಇದಾದ ಬಳಿಕ ಉದ್ಯೋಗ ಖಾತರಿ ಯೋಜನೆಯಡಿ ಜನರಿಗೆ ಉದ್ಯೋಗ ಕೊಟ್ಟು ವಲಸೆ ಹೋಗುವುದನ್ನು ತಡೆಯಬೇಕು. ಪ್ರತಿ ಗ್ರಾಮಪಂಚಾಯಿತಿಗೊಂದು ಕೆರೆ ಅಭಿವೃದ್ದಿ ಪಡಿಸಬೇಕು ಎಂದು ಆಗ್ರಹಿಸಿದರು.
2017-18ನೇ ಸಾಲಿನಲ್ಲಿ ಬೆಳೆ ವಿಮೆ ಮಾಡಿದ ರೈತರಿಗೆ ಬೆಳೆನಷ್ಟವನ್ನು ಅನುಭವಿಸಿದ್ದಾರೆ. ಬೆಲೆ ಇಲ್ಲದೆ ಮಾಡಿದ ಸಾಲವನ್ನು ತೀರಿಸಲಾಗದೆ ಅಸಹಾಯಕರಾಗಿದ್ದು ವಿಮಾ ಕಂಪನಿಗಳಿಂದ ತಕ್ಷಣ ವಿಮೆ ಹಣವನ್ನು ರೈತರ ಖಾತೆಗೆ ಜಮಾ ಮಾಡಬೇಕು. ಶೇಂಗಾ ಬೆಳೆ ನಷ್ಟ ಪರಿಹಾರವನ್ನು ನೀಡಬೇಕು. ಅಕ್ರಮ ಮದ್ಯವನ್ನು ಪ್ರತಿ ಹಳ್ಳಿಯಲ್ಲಿ ಮಾರಾಟ ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು. ಮೊಳಕಾಲ್ಮೂರು ಚಳ್ಳಕೆರೆ ತಾಲ್ಲೂಕಿನ ಗೋಶಾಲೆ ಪ್ರಾರಂಭಿಸಬೇಕು. ಈರುಳ್ಳಿ, ಮೆಕ್ಕೆಜೋಳ, ಶೇಂಗಾಕ್ಕೆ ಬೆಂಬಲ ಬೆಲೆ ಘೋಷಿಸಿ ಖರೀದಿ ಕೇಂದ್ರಗಳನ್ನು ತೆರೆಯಬೇಕು ಎಂದು ರಾಜ್ಯ ಹಿರಿಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ಆಗ್ರಹಿಸಿದರು. ಮುಖಂಡರಾದ ಓಂಕಾರಪ್ಪ, ಪಾಪಯ್ಯ, ಬಸ್ತಿಹಳ್ಳಿ ಸುರೇಶ್‍ಬಾಬು, ತಿಪ್ಪೇಸ್ವಾಮಿ, ಮಂಜುನಾಥ್, ಧನರಂಜಯ ಮತ್ತಿತರರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ