ಚಿತ್ರದುರ್ಗ
ಕನ್ನಡ ಶಾಲೆಗಳಲ್ಲಿ ಅಭ್ಯಾಸ ಮಾಡಿಸುವಂತಹ ಕೆಲಸ ಪೋಷಕರು ಮಾಡಿದರೆ ಮಾತ್ರ ಕನ್ನಡ ಉಳಿಸಲು ಸಾಧ್ಯ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ತಿಳಿಸಿದ್ದಾರೆ.
ನಗರದ ಐಯುಡಿಪಿ ಲೇ ಔಟ್ನಲ್ಲಿ ಗುರುವಾರ ಸಂಜೆ ಜೈ ಭುವನೇಶ್ವರಿ ನಾಗರೀಕರ ಹಿತಾರಕ್ಷಣಾ ವೇದಿಕೆ ವತಿಯಿಂದ. ಆಯೋಜಿಸಿದ್ದ 7 ನೇ ವರ್ಷದ ಕನ್ನಡ ರಾಜ್ಯೋತ್ಸವ ಮತ್ತು ಗ್ರಂಥಾಲಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸ್ವತಂತ್ರ ಬಂದ ಮೇಲೆ ಭಾಷಾವಾರು ಪ್ರಾಂತ್ಯಗಳಾಗಿ ಮಾಡಿದರು. ಯುವಕರು ಕನ್ನಡವನ್ನು ಮರೆಯುತ್ತಿದ್ದಾರೆ. ಇಂಗ್ಲಿಷ್ ವ್ಯಾಮೋಹ ಮರೆತು ಕನ್ನಡ ಕಲಿಯಬೇಕು. ಕನ್ನಡದಲ್ಲಿ ಅಧ್ಯಯನ ಮಾಡಿದ ಅನೇಕರು ಪ್ರಮುಖ ಹುದ್ದೆಯನ್ನು ಪಡೆದಿದ್ದಾರೆ. ಹಾಗೂ ಕನ್ನಡ ಭಾಷೆಗೆ ಇತಿಹಾಸವನ್ನು ಹೊಂದಿರುವ ಭಾಷೆಯಾಗಿದೆ. ಕನ್ನಡ ಶಾಲೆಗಳಲ್ಲಿ ಅಭ್ಯಾಸ ಮಾಡಿಸುವಂತಹ ಕೆಲಸ ಪೋಷಕರು ಮಾಡಿದರೆ ಮಾತ್ರ ಕನ್ನಡ ಉಳಿಸಲು ಸಾಧ್ಯ ಎಂದರು. ಗ್ರಂಥಾಲಯವನ್ನು ಎಲ್ಲಾರೂ ಉಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಈ ಭಾಗದ ರಸ್ತೆ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹಣವನ್ನು ನೀಡಲು ಸಂಘಗಳು ಮತ್ತು ಜನರು ಒತ್ತಡದಿಂದ ಸಾಕಷ್ಟು ಅಭಿವೃದ್ಧಿ ಆಗಿದೆ. ನಗರಸಭೆ ಸದಸ್ಯರು ಪ್ರತಿನಿತ್ಯ ಜನರ ಕಷ್ಟ ಆಲಿಸಬೇಕು ಎಂದು ಕಿವಿ ಮಾತು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸಂಸದ ಚಂದ್ರಪ್ಪ ಒಂದು ದಿನದ ಮಟ್ಟಿಗೆ ಕನ್ನಡ ರಾಜ್ಯೋತ್ಸವ ಸಿಮೀತವಾಗಬಾರದು ಏಕೆಂದರೆ ಕನ್ನಡ ಮಾತನಾಡುವಂತಹ ಜನರೆ ಕನ್ನಡ ಮರೆತರೆ ಹೇಗೆ ಎಂದು ಪ್ರಶ್ನಿಸಿದರು. ಕರ್ನಾಟಕ ಮತ್ತು ಕನ್ನಡ ಭಾಷೆಯ ಕುರಿತು ತಂದೆ ತಾಯಿಗಳು ಮಕ್ಕಳಿಗೆ ಕನ್ನಡದ ವಿಚಾರ, ನೆಲ ಜಲ ವಿಚಾರಗಳನ್ನು ತಿಳಿಸಿ ಕನ್ನಡಕ್ಕೆ ಗೌರವವನ್ನು ತರಬೇಕು ಎಂದು ಹೇಳಿ.ಕನ್ನಡ ಉಳಿಸಿ ಬೆಳೆಸುವಂತಹ ಕೆಲಸವನ್ನು ಯುವ ಸಮುದಾಯ ಮಾಡಬೇಕು ಎಂದು ಹೇಳಿದರು.
ಚಳ್ಳಕೆರೆ ಶಾಸಕ ಟಿ.ರಘು ಮರ್ತಿ ಮಾತನಾಡಿ ಕನ್ನಡವನ್ನು ಉಳಿಸುವ ದಿಕ್ಕಿನಲ್ಲಿ ಕರ್ನಾಟಕ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಕನ್ನಡ ಶಾಲೆಗಳಲ್ಲಿ ಗುಣಮಟ್ಟದ ಶಿಕತಷಣಕ್ಕೆ ಒತ್ತು ನೀಡಲಾಗುವುದು ಎಂದು ತಿಳಿಸಿದರು. ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಕ್ರೀಡೆಯಲ್ಲಿ ಭಾಗವಹಿಸಿ ಗೆಲುವು ಸಾಧಿಸಿದ ಮಕ್ಕಳಿಗೆ ಪ್ರಶಸ್ತಿ ಮತ್ತು ಸನ್ಮಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮರ್ಚೆಂಟ್ ಬ್ಯಾಂಕ್ ಅಧ್ಯಕ್ಷ ಎಸ್.ಆರ್.ಲಕ್ಷ್ಮಿಕಾಂತ ರೆಡ್ಡಿ, ನಿವೃತ್ತ ಪ್ರಾಂಶುಪಾಲರಾದ ಸಂಗೇನಹಳ್ಳಿ ಅಶೋಕ ಕುಮಾರ್, ನಗರಸಭೆ ಸದಸ್ಯೆ ತಾರಕೇಶ್ವರಿ ಬಾಲಸ್ವಾಮಿ, ಮಾಜಿ ನಗರಸಭೆ ಸದಸ್ಯರಾದ ರುದ್ರಾಣಿ ಗಂಗಾಧರ್, ಮಂಜುಳಮ್ಮ ಮತ್ತು ಜೈ ಭುವನೇಶ್ವರಿ ಸಂಘದ ಅಧ್ಯಕ್ಷ ಮುನಿಸ್ವಾಮಿ, ಸಮುದಾಯ ಸಂಘಟನಾಧಿಕಾರಿ ಬಿ.ಆರ್.ಮಂಜುಳ ಮತ್ತು ಪಧಾಧಿಕಾರಿಗಳು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
