ಬೆಂಗಳೂರು
ರಾಜ್ಯದಲ್ಲಿನ ಜಲಾಶಯಗಳಲ್ಲಿನ ಹೂಳು ತೆಗೆಯುವ ಕೆಲಸಗಳಿಗೆ ಆದ್ಯತೆ ನೀಡಲು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೂಚನೆ ನೀಡಿದರು.
ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ತುಂಗಭದ್ರಾ ಜಲಾಶಯದಲ್ಲಿ ಹೂಳಿನಿಂದಾಗಿ 33 ಟಿಎಂಸಿ ನೀರಿನ ಸಂಗ್ರಹ ಸಾಮಥ್ರ್ಯ ಕಡಿಮೆಯಾಗಿದ್ದು, ನಷ್ಟವಾದ ಸಾಮಥ್ರ್ಯವನ್ನು ಮರುಭರಿಸಲು ಫ್ಲಡ್ ಪ್ಲೋಕೆನಾಲ್ ಮೂಲಕ ನೀರನ್ನು ನವಲಿ ಗ್ರಾಮದ ಹತ್ತಿರ ಸಮತೋಲನಾ ಜಲಾಶಯವನ್ನು ನಿರ್ಮಿಸಿ ನೀರನ್ನು ಶೇಖರಿಸಿ ಬಳಸಲು ಯೋಜಿಸಲಾಗಿದೆ.
ಹೂಳು ತೆಗೆಯುವಕಾರ್ಯಕ್ಕೆಆದ್ಯತೆ ನೀಡಿ ಈ ಸಂಬಂಧಕಾರ್ಯಕ್ರಮರೂಪಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಮಹಾದಾಯಿ ನೀರನ್ನು ಬಳಸಿಕೊಳ್ಳಲು ಮಹಾದಾಯಿ ನ್ಯಾಯಾಧೀಕರಣದ ವ್ಯಾಪ್ತಿಯಲ್ಲಿ ಬರುವ ಕಾನೂನಿನ ತೊಡಕುಗಳನ್ನು ನಿವಾರಿಸಿಕೊಳ್ಳಲು ಕ್ರಮ ಕೈಗೊಳ್ಳಬೇಕೆಂದರು. ಮುಂದುವರೆದುಅವರು, ರಾಜ್ಯದಲ್ಲಿ ಎಲ್ಲ ನೀರಾವರಿ ಯೋಜನೆಗಳಿಂದ ಒಟ್ಟು 66.66 ಲಕ್ಷ ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗುತ್ತಿದೆ .
ಇನ್ನೂ 11.46 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯಕಲ್ಪಿಸಬೇಕಿದೆ. ಪ್ರತಿ ವಿಧಾನ ಸಭಾಕ್ಷೇತ್ರದಲ್ಲಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಪ್ರಾರಂಭವಾಗಿದ್ದು, ನೈಸರ್ಗಿಕ ಮೂಲಗಳಿಂದ ಕುಡಿಯುವ ನೀರನ್ನು ಒದಗಿಸುವ ಜಲಧಾರೆ ಯೋಜನೆಯು ಜಾರಿಗೆ ಬಂದಿದೆ. ಗ್ರಾಮಗಳಿಗೆ ಕುಡಿಯುವ ನೀರನ್ನು ಒದಗಿಸಲು ಆದ್ಯತೆ ನೀಡುವ ಕಾರ್ಯಕ್ರಮ ಇದಾಗಿದೆ ಎಂದು ಹೇಳಿದರು.
ಮೇಕೆದಾಟು ಯೋಜನೆ ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾಗಿದ್ದು, ಬೆಂಗಳೂರು ನಗರಕ್ಕೆ ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದರು.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು , ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲಭಾಗಗಳಲ್ಲಿ ಕುಡಿಯುವ ನೀರುಒದಗಿಸುವ ಎತ್ತಿನಹೊಳೆ ಯೋಜನೆಯ ಮೊದಲನೇ ಹಂತದಏತ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಮುಂಗಾರಿನಲ್ಲಿ ಪ್ರಾಯೋಗಿಕವಾಗಿ ಚಾಲನೆ ನೀಡುವಕಾರ್ಯಕ್ಕೆ ವೇಗ ನೀಡಬೇಕು. ಅಧಿಕಾರಿಗಳು ಅಂದಾಜು ವೆಚ್ಚ ತಯಾರಿಸುವ ಸಂದರ್ಭದಲ್ಲಿ ನೀರಿನ ಸದ್ಬಳಕೆಗೆ ಒತ್ತು ನೀಡಬೇಕೆಂದು ತಿಳಿಸಿದರು.
ಕೆ.ಸಿ ವ್ಯಾಲಿ ಯೋಜನೆಯಿಂದಕೋಲಾರ ಭಾಗದರೈತರಿಗೆ ಅನುಕೂಲವಾಗಿದ್ದು, ಅಂತರ್ಜಲ ಮಟ್ಟ ಹೆಚ್ಚಾಗಿದೆ. ಕೃಷಿ ಬಳಕೆಗೆ ನೀರುಯೋಗ್ಯವಾಗಿದ್ದು, ನೀರಿನ ಪುನರ್ಬಳಕೆಯ ಇಂತಹ ಯೋಜನೆಗಳಿಗೆ ಆದ್ಯತೆ ನೀಡಬೇಕುಎಂದರು .
ರಾಜ್ಯದ ಅಭಿವೃದ್ಧಿಗೆ ಪ್ರಮುಖಅಂಗವಾಗಿರುವ ಜಲಸಂಪನ್ಮೂಲ ಇಲಾಖೆ ಎರಡುಆಯವ್ಯಯದಲ್ಲಿಒಟ್ಟಾರೆ 37 ಸಾವಿರಕೋಟಿ ರೂಗಳನ್ನು ಹಂಚಿಕೆ ಮಾಡಲಾಗಿದೆ. ಈ ಅನುದಾನದ ಸದ್ಬಳಕೆ ಮಾಡುವಜವಾಬ್ದಾರಿ ಅಧಿಕಾರಿಗಳ ಮೇಲಿದೆಎಂದು ಮುಖ್ಯಮಂತ್ರಿಗಳು ತಿಳಿಸಿದರು.
ನಿರಂತರ ಬರ ಹಾಗೂ ಮಳೆಯ ಕೊರತೆಯಿಂದಾಗಿರಾಜ್ಯದಲ್ಲಿನ ಜಲಾಶಯಗಳಲ್ಲಿ ನೀರಿನ ಪ್ರಮಾಣ ಹಂತ ಹಂತವಾಗಿ ಕುಸಿಯುತ್ತಿದೆ. ಇದೇ ಸಮಯದಲ್ಲಿಕುಡಿಯುವ ನೀರಿಗೆ ಬೇಡಿಕೆಯೂ ಹೆಚ್ಚಾಗಿದೆ. ಪ್ರತಿಗ್ರಾಮ ಮತ್ತು ನಗರಕ್ಕೆಕುಡಿಯುವ ನೀರು ಹಾಗೂ ಕೃಷಿಗೆ ನೀರನ್ನುಒದಗಿಸುವುದು ಪ್ರಥಮಆದ್ಯತೆ ಆಗಬೇಕು. ಕುಡಿಯುವ ನೀರು ಹೊರತುಪಡಿಸಿ, ಉಳಿದ ನೀರನ್ನು ದುರ್ಬಳಕೆ ಮಾಡದೆಕಡಿಮೆ ನೀರು ಬಳಸಿ ಬೆಳೆಯಬಹುದಾದ ಬೆಳೆಗಳ ಬಗ್ಗೆ ರೈತರಿಗೆ ತಿಳುವಳಿಕೆ ಮೂಡಿಸಬೇಕಿದೆಎಂದುಅವರು ಹೇಳಿದರು.
ಉಪಮುಖ್ಯಮಂತ್ರಿ ಡಾ|| ಜಿ,ಪರಮೇಶ್ವರ್ ಮಾತನಾಡಿ, ನಮ್ಮ ನೀರಾವರಿ ಸಾಮಥ್ರ್ಯವನ್ನುತಲುಪಲು ನೀಲನಕ್ಷೆಯನ್ನು ರೂಪಿಸಬೇಕು . ಗುರಿ ಮುಟ್ಟಲುಕಾರ್ಯನಿರತರಾಗಬೇಕು. ಯೋಜನೆಗಳನ್ನು ರೂಪಿಸುವ ಸಂದರ್ಭದಲ್ಲಿದೂರದೃಷ್ಟಿಇರಬೇಕು. ಜಲಸಂಪನ್ಮೂಲ ಇಲಾಖೆಯಅಧೀನದಲ್ಲಿ ಬರುವ ಪ್ರತಿ ನಿಗಮದ ವ್ಯವಸ್ಥೆಯನ್ನು ಮೌಲ್ಯಮಾಪನ ಮಾಡಿ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆಗಳನ್ನು ನಡೆಸಬೇಕೆಂದು ಸಲಹೆ ನೀಡಿದಅವರು, ಕೃಷಿಯಿಂದಉದ್ಯೋಗ ಸೃಜನೆ ಹಾಗೂ ಕೃಷಿ ಉತ್ಪನ್ನಗಳ ವೃದ್ಧಿಯಾಗಿ, ರಾಜ್ಯದಆರ್ಥಿಕ ಶಕ್ತಿ ಹೆಚ್ಚಾಗುತ್ತದೆಎಂದರು.
ಸಭೆಯಲ್ಲಿ ಲೋಕೋಪಯೋಗಿ ಸಚಿವಹೆಚ್.ಡಿ.ರೇವಣ್ಣ, ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು, ಜಲಸಂಪನ್ಮೂಲ ಇಲಾಖೆಯ ಸಂಸದೀಯ ಕಾರ್ಯದರ್ಶಿ ಗೋಪಾಲಸ್ವಾಮಿ , ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ , ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಸುಬ್ರಮಣ್ಯಂ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
