ಉತ್ತಮ ಭವಿಷ್ಯಕ್ಕಾಗಿ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಿ.

ದಾವಣಗೆರೆ:

    ಉನ್ನತ ಶಿಕ್ಷಣ ಕೊಡಿಸುವ ಮೂಲಕ ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಿಕೊಡಬೇಕೆಂದು ಸಿದ್ಧಗಂಗಾ ಪಿಯು ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಸುಬ್ರಮಣ್ಯ ಅವರು ಪೋಷಕರಿಗೆ ಕರೆ ನೀಡಿದರು.

     ನಗರದ ಸಿದ್ಧಗಂಗಾ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ಸಂಜೆ ನಡೆದ ಎಂಎಸ್‍ಎಸ್ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪೋಷಕರು ತಮ್ಮ ಮಕ್ಕಳಿಗೆ ಪದವಿ ವರೆಗೆ ಮಾತ್ರ ಶಿಕ್ಷಣ ಕೊಡಿಸಿ, ನಂತರ ಮೊಟಕು ಗೊಳಿಸುವುದು ಸರಿಯಲ್ಲ. ಉನ್ನತ ಶಿಕ್ಷಣದವರೆಗೂ ವಿದ್ಯಾಭ್ಯಾಸ ಕೊಡಿಸಿ ಅವರಿಗೆ ಉತ್ತಮ ಭವಿಷ್ಯ ರೂಪಿಸಿಕೊಡುವ ಅವಶ್ಯಕತೆ ಇದೆ ಎಂದರು.

     ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸಾಕಷ್ಟು ಪೈಪೋಟಿ ಇದೆ. ಆದ್ದರಿಂದ ಪದವಿ ವರೆಗಿನ ಶಿಕ್ಷಣ ಯಾವುದಕ್ಕೂ ಸಾಲುವುದಿಲ್ಲ. ಕೊನೆಯ ಪಕ್ಷ ಸ್ನಾತಕೋತ್ತರ ಪದವಿ ವರೆಗಾದರೂ ಶಿಕ್ಷಣ ಕೊಡಿಸಬೇಕಾದ ಅವಶ್ಯಕತೆ ಇದೆ ಎಂದ ಅವರು ಭವಿಷ್ಯದ ಶೈಕ್ಷಣಿಕ ಪ್ರಪಂಚದಲ್ಲಿ ಸಾಕಷ್ಟು ಸವಾಲುಗಳಿದ್ದು, ಅವುಗಳನ್ನು ಎದುರಿಸುವ ಜಾಣ್ಮೆಯನ್ನು ವಿದ್ಯಾರ್ಥಿಗಳು ಕರಗತ ಮಾಡಿಕೊಳ್ಳಬೇಕಾದ ಅವಶ್ಯಕತೆ ಇದೆ ಎಂದರು.

     ಇಂದಿನ ವಿದ್ಯಾರ್ಥಿಗಳು ಸಾಕಷ್ಟು ಬುದ್ದಿವಂತರಿದ್ದು, ಅವರಿಗೆ ಪಾಠ ಮಾಡಲು ಕೆಲ ಬಾರಿ ನಮ್ಮಂತಹ ಉಪನ್ಯಾಸಕರಿಗೆ ಭಯವಾಗುತ್ತದೆ ಎಂದ ಅವರು, ಎಂಎಸ್‍ಎಸ್ ಸ್ಕಾಲರ್‍ಶಿಪ್ ವಿತರಣೆಯ ಹಿಂದೆ ಯಾವುದೇ ಸ್ವಾರ್ಥ ಇಲ್ಲ. ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಗೌರವಿಸುವುದೇ ಇದರ ಉದ್ದೇಶವಾಗಿದೆ ಎಂದು ನುಡಿದರು.

     ಅಧ್ಯಕ್ಷತೆ ವಹಿಸಿದ್ದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಸಿ.ನಿರಂಜನ್ ಮಾತನಾಡಿ, ಶಿಕ್ಷಣ, ಕಲೆ, ಸಂಸ್ಕøತಿ ಸೇರಿದಂತೆ ಎಲ್ಲ ವರ್ಗದಲ್ಲೂ ಸಿದ್ಧಗಂಗಾ ಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವುದು ಶ್ಲಾಘನೀಯವಾಗಿದೆ. ಸಾಧಕರನ್ನು ತಯಾರುಮಾಡುವ ಸಿದ್ಧಗಂಗಾ ವಿದ್ಯಾಸಂಸ್ಥೆಯ ಸಾಧನೆ ಇನ್ನಷ್ಟು ಎತ್ತರಕ್ಕೆ ಏರಲಿ ಎಂದು ಶುಭ ಹಾರೈಸಿದರು.

      ಸಂಸ್ಥೆಯ ಪಿಯು ವಿಭಾಗದ ನಿರ್ದೇಶಕ ಡಾ.ಡಿ.ಎಸ್.ಜಯಂತ್ ಮಾತನಾಡಿ, ಸಿದ್ಧಗಂಗಾ ವಿದ್ಯಾಸಂಸ್ಥೆಯ ಸಂಸ್ಥಾಪಕರಾದ ಶಿವಣ್ಣನವರು ವ್ಯಕ್ತಿಯಲ್ಲ, ಅವರೊಂದು ಶಕ್ತಿ. ಸಂಸ್ಥೆ ಆರಂಭಗೊಂಡು 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ವರ್ಷ ಪೂರ್ತಿ ಹತ್ತು ಹಲವು ಕಾರ್ಯಕ್ರಮಗಳನ್ನು ಅಯೋಜಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

     ಸಂಸ್ಥೆಯ ಮುಖ್ಯಸ್ಥೆ ಜಸ್ಟೀನ್ ಡಿ’ಸೌಜಾ ಮಾತನಾಡಿ, ಶಿವಣ್ಣ ಅವರ 75ನೇ ಹುಟ್ಟುಹಬ್ಬ ನಡೆದ 2014 ರಿಂದ ಪ್ರತಿವರ್ಷ ಎಂಎಸ್‍ಎಸ್ ಸ್ಕಾಲರ್ ಶಿಪ್ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. ಈ ಬಾರಿ 58 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸ್ಕಾಲರ್‍ಶಿಪ್ ನೀಡಲಾಗುವುದು ಎಂದರು.ಕಾರ್ಯಕ್ರಮದಲ್ಲಿ ಪಿಯು ಕಾಲೇಜಿನ ಪ್ರಾಂಶುಪಾಲರಾದ ಗಾಯತ್ರಿ, ಜೀವಶಾಸ್ತ್ರ ವಿಭಾಗದ ಮುಖ್ಯಸ್ಥ ಎನ್.ಸಿ.ವಿವೇಕ್ ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap