ವಲಸೆ ಕಾರ್ಮಿಕರಿಗೆ ಮನರೇಗಾದಡಿ ಕೆಲಸ ನೀಡಿ : ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು

   ಕೊರೋನಾ ಸಂಕಷ್ಟದಿಂದಾಗಿ ಹಿನ್ನೆಲೆಯಲ್ಲಿ ನಗರ ಪ್ರದೇಶಗಳಿಂದ ಹಳ್ಳಿಗಳಿಗೆ ಹಿಂದಿರುಗಿರುವ ವಲಸೆ ಕಾರ್ಮಿಕರಿಗೆ ಮನರೇಗಾ ಯೋಜನೆಯಡಿ ಉದ್ಯೋಗ ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು ಪ್ರಸಕ್ತ ಸಾಲಿನಲ್ಲಿ ಉದ್ಯೋಗ ಖಾತರಿ ಯೋಜನೆಯಡಿ 13 ಕೋಟಿ ಮಾನವ ದಿನಗಳ ಸೃಷ್ಟಿಯ ಗುರಿಯಿದ್ದು 6 ಸಾವಿರದ 315 ಕೋಟಿ 79 ಲಕ್ಷ ರೂಪಾಯಿ ಅನುದಾನ ನಿಗದಿ ಪಡಿಸಲಾಗಿದೆ ಎಂದು ತಿಳಿಸಿದರು.

    ಗ್ರಾಮೀಣ ಪ್ರದೇಶದಲ್ಲಿ ಬೇಸಿಗೆಯ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರ ವಹಿಸುವಂತೆ ಅವರು ನಿರ್ದೇಶನ ನೀಡಿದರು. ಬೇಸಿಗೆಯಲ್ಲಿ ನೀರಿನ ಸಮಸ್ಯೆ ಇರುವ 14 ಜಿಲ್ಲೆಗಳ 659 ಗ್ರಾಮಗಳಲ್ಲಿ 389 ಟ್ಯಾಂಕರ್ ಮತ್ತು 706 ಖಾಸಗಿ ಕೊಳವೆ ಬಾವಿಗಳಿಂದ ನೀರು ಪೂರೈಕೆ ಆಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

    ಕೇಂದ್ರ ಸರ್ಕಾರದ ಜಲ ಜೀವನ್ ಅಭಿಯಾನ ಯೋಜನೆ, ರಾಜ್ಯ ಸರ್ಕಾರದ ಜಲಧಾರೆ ಯೋಜನೆ, ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಮೊದಲಾದ ವಿಷಯಗಳ ಕುರಿತಂತೆಯೂ ಸಭೆಯಲ್ಲಿ ಚರ್ಚಿಸಲಾಯಿತು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link