ಸಾರಿಗೆ ದರ ದೈನಿಕವಾಗಿ ಬದವಾಣೆಗೆ ಅವಕಾಶ ನೀಡಬೇಕು : ಡಿ.ಸಿ.ತಮ್ಮಣ್ಣ

ಬೆಂಗಳೂರು :

      ಪೆಟ್ರೋಲ್ ಮತ್ತು ಡೀಸೆಲ್ ದರ ದಿನಂಪ್ರತಿ ಪರಿಷ್ಕರಣೆಗೆ ಅನುಮತಿ ನೀಡಿದಂತೆ ರಾಜ್ಯ ರಸ್ತೆ ಸಾರಿಗೆ ಪ್ರಯಾಣ ದರವನ್ನು ಏರು-ಇಳಿಕೆ ಮಾಡುವ ಅಧಿಕಾರವನ್ನು ನೀಡಬೇಕೆಂದು ಮುಖ್ಯಮಂತ್ರಿಯವರಿಗೆ ಸಾರಿಗೆ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದ್ದಾರೆ.

      ವಿಧಾನಸೌಧದಲ್ಲಿ ಇಂದು ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2013-14 ರಲ್ಲಿ ಬಸ್ ದರವನ್ನು ಪರಿಷ್ಕರಿಸಲಾಗಿತ್ತು. ನಂತರ ಹಲವಾರು ಬಾರಿ ತೈಲ ಬೆಲೆಗಳು ಗಣನೀಯವಾಗಿ ಏರಿಕೆಯಾಗಿವೆ. ಬಸ್‍ಗಳ ಸ್ಪೇರ್ ಪಾಟ್ರ್ಸ್ ದರವೂ ಸಹ ಏರಿಕೆಯಾಗಿದ್ದು, ದರ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದರು.

     ದರ ಏರಿಕೆ ಕುರಿತಂತೆ ಈಗಾಗಲೇ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಸಮಾಲೋಚನೆ ಮಾಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರದಂತೆ ಮೂರು ತಿಂಗಳಿಗೊಮ್ಮೆ ಪರಿಷ್ಕರಣೆ ಮಾಡುವ ಅಧಿಕಾರವನ್ನು ನೀಡಬೇಕೆಂಬ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೀಘ್ರದಲ್ಲೇ ಈ ಕುರಿತಂತೆ ತೀರ್ಮಾನ ಪ್ರಕಟವಾಗುವ ನಿರೀಕ್ಷೆ ಇದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಅಮಾನತು :

      ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮದಲ್ಲಿ ಅನವಶ್ಯಕವಾಗಿ ಸ್ಪೇರ್ ಪಾಟ್ರ್ಸ್ ಗಳನ್ನು ಖರೀದಿ ಮಾಡಿದ್ದು, ಈ ಕುರಿತಂತೆ ಜಾಗೃತದಳ ನೀಡಿರುವ ವರದಿಯಂತೆ ಒಟ್ಟು 11 ಮಂದಿಯನ್ನು ಅಮಾನತು ಮಾಡಲಾಗಿದೆ ಎಂದು ಡಿ.ಸಿ. ತಮ್ಮಣ್ಣ ತಿಳಿಸಿದರು.
ಸೀಟು ಕವರ್ ಮೇಲೆ ಹಾಕುವ ರೆಗ್‍ಜಿóನ್ ಖರೀದಿ ಸಂಬಂಧಿಸಿದಂತೆ ನಾಲ್ವರನ್ನು ಅಮಾನತು ಮಾಡಲಾಗಿದೆ. ಸ್ಪೇರ್ ಪಾಟ್ರ್ಸ್ ಖರೀದಿ ಪ್ರಕರಣದಲ್ಲಿ ಏಳು ಮಂದಿಯನ್ನು ಅಮಾನತು ಮಾಡಲಾಗಿದೆ. ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರ ಸಹಿಯನ್ನು ನಕಲು ಮಾಡಿ 141 ಮಂದಿಯನ್ನು ವರ್ಗಾವಣೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯನ್ನು ಅಮಾನತುಮಾಡಿ ತನಿಖೆಗೆ ಆದೇಶ ಮಾಡಲಾಗಿದೆ ಎಂದರು.

       ಸಾರಿಗೆ ಇಲಾಖೆಯಲ್ಲಿ ಅಪಾರ ಪ್ರಮಾಣದ ಸ್ಪೇರ್ ಪಾಟ್ರ್ಸ್ ಹಾಗೂ ಅಪಾರ ಪ್ರಮಾಣದ ಇತರ ವಸ್ತುಗಳನ್ನು ಖರೀದಿ ಮಾಡಿದ್ದು, ಅವುಗಳು ಸಮರ್ಪಕವಾಗಿ ಬಳಕೆಯಾಗಿರುವ ಬಗ್ಗೆ ಮಾಹಿತಿ ಇಲ್ಲ. ಇನ್ನು ಮುಂದೆ ಎಲ್ಲ ಸ್ಪೇರ್ ಪಾಟ್ರ್ಸ್, ಟಯರ್, ಟೂಬ್ ಗಳ ಪ್ರಮುಖ ಉತ್ಪಾದಕರ ಕಂಪನಿಗಳು ರಾಜ್ಯ ರಸ್ತೆ ಸಾರಿಗೆ ನಿಗಮದ ಆವರಣದಲ್ಲಿಯೇ ಘಟಕ ಸ್ಥಾಪಿಸಿ ಅಗತ್ಯವಿರುವ ಉಪಕರಣಗಳನ್ನು ಖರೀದಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

       ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮದಲ್ಲಿ ಅಪಾರ ಪ್ರಮಾಣದ ಅನಗತ್ಯ ವಸ್ತುಗಳನ್ನು ಖರೀದಿ ಮಾಡಿ ಗೋದಾಮಿನಲ್ಲಿ ದಾಸ್ತಾನು ಮಾಡಿದ್ದಾರೆ. ಈ ಕುರಿತಂತೆ ಜಾಗೃತದಳ ಹಲವು ವರದಿ ನೀಡಿದ್ದು, ಶೀಘ್ರದಲ್ಲೇ ವರದಿ ಆಧರಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

        ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಕ್ಕೆ 3 ಸಾವಿರ ಹೈಟೆಕ್ ಬಸ್ ಗಳನ್ನು ಶೀಘ್ರದಲ್ಲೇ ಸೇರ್ಪಡೆ ಮಾಡಲಾಗುವುದು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 7 ಲಕ್ಷ ಕಿ.ಮೀ ಸಂಚರಿಸಿದ ಬಸ್ ಗಳನ್ನು ಗುಜರಿಗೆ ಹಾಕಲಾಗಿದೆ. ಅವುಗಳನ್ನು ಹೊಸದಾಗಿ ಮರು ನಿರ್ಮಾಣ ಮಾಡಿ ಪುನಃ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

       ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಸಿಬ್ಬಂದಿಯ ಕೊರತೆ ಇಲ್ಲ. ಹೊಸದಾಗಿ ಮೂರು ಸಾವಿರ ಬಸ್ ಗಳ ಸೇರ್ಪಡೆಯ ನಂತರವೂ ಸಮರ್ಪಕವಾಗಿ ಸಂಚಾರಕ್ಕೆ ಅವಕಾಶ ದೊರೆಯುವುದರ ಜೊತೆ ಗ್ರಾಮೀಣ ಭಾಗದ ಸೇವೆಯನ್ನು ಇನ್ನಷ್ಟು ವಿಸ್ತರಿಸಲು ಉದ್ದೇಶಿಸಲಾಗಿದೆ ಎಂದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap