ಬಳ್ಳಾರಿ
ನಮ್ಮ ರಾಷ್ಟ್ರದ ನೇರೆಯ ಪಾಕಿಸ್ತಾನ ಮತ್ತು ಅಫಘಾನಿಸ್ತಾನಗಳಲ್ಲಿ ಇನ್ನು ಪೋಲಿಯೋ ಪ್ರಕರಣಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಬರುವ ಜನೇವರಿ 19 ರಂದು ತಪ್ಪದೆ ಎಲ್ಲ ಹುಟ್ಟಿನಿಂದ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಲಸಿಕೆಯನ್ನು ಹಾಕಿಸಲು ಅಗತ್ಯ ಸಿದ್ದತೆಯನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಹೆಚ್.ಎಲ್.ಜನಾರ್ಧನ್ ತಿಳಿಸಿದರು.
ನಗರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲ 08 ತಾಲೂಕಿನ ತಾಲೂಕಾ ಆರೋಗ್ಯಾಧಿಕಾರಿಗಳಿಗೆ, ಸಾರ್ವಜನಿಕ ಆಸ್ಪತ್ರೆ ಮತ್ತು ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆಡಳಿತ ವೈದ್ಯಾಧಿಕಾರಿಗಳಿಗೆ ಪಲ್ಸ್‍ಪೋಲಿಯೋ ಕುರಿತ ಅಗತ್ಯ ಸಿದ್ದತೆಯ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿದರು.
2011 ಜನೇವರಿ 13 ರಂದು ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ವರದಿಯಾಗಿದ್ದು ಈಗಾಗಲೆ ಭಾರತ ಪೋಲಿಯೋ ಮುಕ್ತ ರಾಷ್ಟ್ರವೆಂದು ಘೋಷಣೆಯಾಗಿದೆ.ಆದರೆ ನೇರೆಯ ರಾಷ್ಟ್ರಗಳಲ್ಲಿ ಇನ್ನೂ ಪ್ರಕರಣಗಳು ಬರುತ್ತಿರುವುದರಿಂದ ನಾವೆಲ್ಲರೂ ಪ್ರತಿ ಮಗುವಿಗೂ ಲಸಿಕೆ ಹಾಕಲು ಶ್ರಮೀಸೋಣವೆಂದರು.
ವಿಶ್ವ ಆರೋಗ್ಯ ಸಂಸ್ಥೆಯ ಬಳ್ಳಾರಿ ವಲಯದ ಸವೇಕ್ಷಣಾ ವೈದ್ಯಾಧಿಕಾರಿ ಡಾ ಆರ್ ಎಸ್ ಶ್ರೀಧರ ಮಾತನಾಡಿ ಪೋಲಿಯೋ ವೈರಸ್‍ನಲ್ಲಿ 3 ವಿಧಗಳಿದ್ದು ಟೈಪ್ 2, ಟೈಪ್ 3 ವೈರಸ್ ನಿರ್ಮೂಲನೆಯಾಗಿದ್ದು ಟೈಪ್ 1 ವೈರಸ್‍ನ ಪ್ರಕರಣಗಳು ಪಕ್ಕದ ರಾಷ್ಟ್ರಗಳಲ್ಲಿ ಕಂಡುಬಂದಿರುವುದರಿಂದ ಮತ್ತು ನಮ್ಮ ದೇಶದ ನಾಗರಿಕರು ಗಲ್ಫ್ ರಾಷ್ಟ್ರಗಳಿಗೆ ದುಡಿಯಲು ಹೋಗುತ್ತಿರುವುದರಿಂದ ಮುಂಜಾಗ್ರತೆಯಾಗಿ ನಾವು ಪೋಲಿಯೋ ಲಸಿಕೆಯನ್ನು ಹುಟ್ಟಿನಿಂದ 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೆ ನೀಡಬೇಕು.ಈ ಹಿನ್ನೆಲೆಯಲ್ಲಿ ವಲಸೆ ಪ್ರದೇಶಗಳು, ಕೈಗಾರಿಕಾ ಪ್ರದೇಶಗಳು, ಇಟ್ಟಿಗೆ ಬಟ್ಟಿಗಳು, ಅಲೇಮಾರಿ ಕುರಿ ಸಾಕಾಣಿಕೆದಾರರು, ತೋಟದ ಮನೆಗಳು, ಕಟ್ಟಡ ನಿರ್ಮಾಣ ಸ್ಥಳಗಳು ಮುಂತಾದ ಸ್ಥಳಗಳಲ್ಲಿ ಮಕ್ಕಳಿರುವ ಬಗ್ಗೆ ಕ್ರಿಯಾಯೋಜನೆಯಲ್ಲಿ ಹೆಚ್ಚಿನ ಆದ್ಯತೆ ನೀಡಿ ಲಸಿಕೆ ಹಾಕುವಂತೆ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ ಅನೀಲಕುಮಾರ ಆರ್, ಜಿಲ್ಲಾ ಕುಷ್ಟರೋಗ ನಿಯಂತ್ರಣ ಅಧಿಕಾರಿ ಡಾ ಟಿ. ರಾಜಶೇಖರ ರೆಡ್ಡಿ, ಜಿಲ್ಲಾ ಕುಟುಂಬ ಕಲ್ಯಾಣಅಧಿಕಾರಿ ಡಾ ವಿಜಯಲಕ್ಷ್ಮೀ ಆರ್, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ ಇಂದ್ರಾಣಿ.ವಿ. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಜಿಲ್ಲಾ ಶೂಶ್ರೂಷಣಾಧಿಕಾರಿ ಸರೋಜ, ಸೇರಿದಂತೆ ತಾಲೂಕಾ ಆರೋಗ್ಯಾಧಿಕಾರಿಗಳು, ಸಾರ್ವಜನಿಕ ಆಸ್ಪತ್ರೆ ಮತ್ತು ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆಡಳಿತ ವೈದ್ಯಾಧಿಕಾರಿಗಳು ಮತ್ತು ಇತರರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ