ತೆಲಂಗಾಣ ಮಾದರಿಯ ವೇತನ ನೀಡಿ :ಶಶಿಧರ ವೇಣಗೋಪಾಲ

ಹಾವೇರಿ :

   ಪೊಲೀಸ್ ಸಿಬ್ಬಂದಿಗಳಿಗೆ ತೆಲಂಗಾಣದಂತೆ ವೇತನ ನೀಡಿ, ತಿಂಗಳೊಳಗೆ ಔರಾದ್ಕರ ವರದಿ ಜಾರಿಗೆ ತನ್ನಿ ಎಂದು ಕರ್ನಾಟಕ ರಾಜ್ಯ ಪೊಲೀಸ್ ಮಹಾ ಸಂಘದ ರಾಜ್ಯಾಧ್ಯಕ್ಷ ಶಶಿಧರ ವೇಣಗೋಪಾಲ ಸರಕಾರವನ್ನು ಒತ್ತಾಯಿಸಿದರು .ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

     ತೆಲಂಗಾಣ ರಾಜ್ಯದಲ್ಲಿ ಒಬ್ಬ ಸಿವಿಲ್ ಪೊಲೀಸ್ ಸುಮಾರು 45 ಸಾವಿರ ರೂ ವೇತನ ಪಡೆಯುತ್ತಾರೆ.ನಮ್ಮ ರಾಜ್ಯದಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ 30 ಸಾವಿರ ಪಡೆಯುತ್ತಾರೆ. ಈ ವೇತನ ತಾರತಮ್ಯ ನಾವು ಖಂಡಿಸುತ್ತೇವೆ .ಜೊತೆಗೆ ಒಂದು ತಿಂಗಳೊಳಗೆ ಔರಾದ್ಕರ ವರದಿ ಜಾರಿಗೆ ತರದಿದ್ದರೇ, ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ಮಹಿಳಾ ಸಂಘಗಳ ಸಹಭಾಗಿತ್ವದಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದರು.

     ಪೊಲೀಸ್ ಇಲಾಖೆ ನಿತ್ಯ ಆಡಳಿತದಲ್ಲಿ ರಾಜಕಾರಣಿ ಕಪಿಮುಷ್ಠಿಯಲ್ಲಿ ಸಿಲುಕಿದೆ. ಇಲಾಖೆಯು ರಾಜಕಾರಣಿಗಳ ಅಣತಿ ಮೇಲೆ ಕಾರ್ಯನಿರ್ವಸುವ ಕೇಂದ್ರಗಳಾಗಿವೆ. ಇವರ ಹಸ್ತಕ್ಷೇಪದಿಂದ ಇಲಾಖೆ ನಲುಗಿ ಹೋಗಿದೆ. ಸರಕಾರಗಳು ಬದಲಾದ ಸಮಯದಲ್ಲಿ ಪೊಲೀಸ್ ವರ್ಗಾವಣೆಯು ಒಂದು ರೀತಿಯಲ್ಲಿ ಹಣ ಗಳಿಸುವ ದಂದೆಗಳಾಗಿ ಮಾರ್ಪಾಡು ಆಗಿವೆ. ಇಲಾಖೆಯಲ್ಲಿ ಕಾನೂನಿಗೆ ಅವಕಾಶ ಇಲ್ಲವಾಗಿದೆ.

    ಪೊಲೀಸರಲ್ಲಿ ರಾಜಕೀಯ ವ್ಯವಸ್ಥೆಯಿಂದ ಅಸಹಾಯಕತೆ ಹೆಚ್ಚಾಗಿದೆ. ಇಲಾಖೆಯ ಸಿಬ್ಬಂದಿಗಳು ವೇತನ ತಾರತಮ್ಯ ಖಂಡಿಸಿ ಹೋರಾಟ ಮಾಡಿದ್ದು, ನಿಜ. ಹೋರಾಟದ ಫಲವಾಗಿ ಔರಾದ್ಕರ ವರದಿ ಬಂದಿದೆ. ಆ ವರದಿ ತುಲನಾತ್ಮಕವಾಗಿ ವಾಸ್ತವಿಕ ವಿಚಾರ ಹೊಂದಿದೆ. ಆದರೆ, ವರದಿಯಂತೆ ಪೊಲೀಸ್ ಇಲಾಖೆಯಲ್ಲಿ ಕವಡೆ ಕಾಸಿನಷ್ಟು ವೇತನ ಹೆಚ್ಚಳವಾಗಿಲ್ಲ. 2018 ರಲ್ಲಿ ನೇಮಕಗೊಂಡ ಪೊಲೀಸ್ ಕಾನ್ಸಸ್ಟೆಬಲ್ 23.500 ವೇತನ ಪಡೆಯುತ್ತಾನೆ.

     2012 ರಲ್ಲಿ ನೇಮಕಗೊಂಡವರು ಅಷ್ಟೇ ಪ್ರಮಾಣದಲ್ಲಿ ವೇತನ ಪಡೆಯುತ್ತಾರೆ. ಇದು ಎಷ್ಟರ ಮಟ್ಟಿಗೆ ಸರಿ ? ನಾವು ಸೇವಾ ಹಿರಿತನವನ್ನು ಪ್ರಶ್ನೆ ಮಾಡುತ್ತಿದ್ದೇವೆ. ವೇತನ ಪರಿಷ್ಕರಣೆ ಮಾಡಿ ಎನ್ನುತ್ತಿದ್ದೇವೆ. ಔರಾದ್ಕರ ವರದಿ ಜಾರಿ ವಿಚಾರದಲ್ಲಿ ಸರಕಾರ ನಿರ್ಲಕ್ಷ್ಯ ಮಾಡಬಾರದು.ಅದನ್ನು ಗೃಹ ಸಚಿವರು ಸರಿಯಾಗಿ ನಿಭಾಯಿಸಬೇಕು.ಇನ್ನು ಒಂದು ತಿಂಗಳಲ್ಲಿ ಈ ವರದಿಯನ್ನು ಜಾರಿಗೆ ತರದಿದ್ದರೆ ನಾವು ಮೂರು ಹಂತದಲ್ಲಿ ಹೋರಾಟ ಮಾಡಬೇಕಾಗುತ್ತದೆ.

      ಮೊದಲನೇದಾಗಿ 35 ಸಾವಿರ ಸಿಬ್ಬಂದಿಗಳು ಡಿಜಿಪಿ ಮನವಿ ಸಲ್ಲಿಸುವುದು.ಎರಡನೇದಾಗಿ ಸಮಾನ ಮನಸ್ಕ ಸಂಘಟನೆಗಳೊಂದಿಗೆ ಸೇರಿ ಹೋರಾಟ. ಮೂರನೇದಾಗಿ ಹೈ ಕೋರ್ಟ್, ಸುಪ್ರೀಮ್ ಕೋರ್ಟ್ ಕಾನೂನ ಸಮರ ಮಾಡುತ್ತೇವೆ ಎಂದು ಶಶಿಧರ ವೇಣಗೋಪಾಲ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ ಮುಖಂಡ ಹನಮಂತಪ್ಪ ಕಬ್ಬಾರ.ದೀಪಕ ಗಂಟಿಸಿದ್ದಪ್ಪನವರ.ಹನಮಂತಪ್ಪ ಕರೂರ.ನಿಂಗಪ್ಪ ಕಡೂರ.ಬೀರೇಶ ಮುಗಕಣ್ನನವರ.ಎಚ್.ಎಂ ತಾಳಿಕೋಟಿ ಅನೇಕರಿದ್ದರು

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link