ದಾವಣಗೆರೆ:
ಐಎಂಎ ಕಂಪನಿಯ ಅಡಿಯಲ್ಲಿ ನಡೆಯುತ್ತಿರುವ ಗ್ಲೋಬಲ್ ಶಾಲೆಯನ್ನು ಸರ್ಕಾರ ವಹಿಸಿಕೊಂಡು ಮಕ್ಕಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಕರ್ನಾಟಕ ಸಮರ ಸೇನೆಯ ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜಯದೇವ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಡಿಡಿಪಿಐ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ದಾವಣಗೆರೆಯಲ್ಲಿ ಐಎಂಎ ಕಂಪನಿ ಅಡಿ ಗ್ಲೋಬಲ್ ಶಾಲೆ ನಡೆಯುತ್ತಿದ್ದು, ಇದರಲ್ಲಿ ನೂರಾರು ಮಕ್ಕಳು ಓದುತ್ತಿದ್ದಾರೆ. ಅವರಿಗೆ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ತೊಂದರೆ ಆಗಬಾರದೆಂಬ ಉದ್ದೇಶದಿಂದ ಸರ್ಕಾರ ಮಧ್ಯ ಪ್ರವೇಶಿಸಿ ಶಾಲೆ ಮುಂದುವರಿಸಬೇಕೆಂದು ಆಗ್ರಹಿಸಿದರು.
ಶಾಲೆಯನ್ನು ಮುಂದುವರಿಸಿಕೊಂಡು ಹೋಗಲು ಮೂರನೇ ವ್ಯಕ್ತಿಗಳು ಮುಂದೆ ಬಂದರೆ, ಯಾವುದೇ ಕಾರಣಕ್ಕೂ ಆಸ್ಪದ ನೀಡದೇ ದೂರವಿಡಬೇಕು. ಅಂತವಹರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಸೇನೆಯ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಕಾರ್ಯಕರ್ತರಾದ ಅನ್ವರ್ ಹುಸೇನ್, ಉಮೇಶ್ ಪಾಟೀಲ್, ಕೆ.ಎನ್.ಓಂಕಾರ್, ಎಂ.ಎಚ್.ಸುಲ್ತಾನ್, ಅಯಾಜ್ ಹುಸೇನ್ ಮತ್ತಿತರರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
