ಬೆಳಗಾವಿ :
ಸಮಾಜದಲ್ಲಿ ಜಾತಿ ಒಡೆದು, ಕೋಮು ಗಲಭೆ ಸೃಷ್ಠಿಸೋದೆ ಬಿಜೆಪಿ ಪಕ್ಷದ ಕೆಲಸವಾಗಿದೆ. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯನ್ನು ಕೊಂದ ಮತಾಂಧ ಗೊಡ್ಸೆ, ಬಿಜೆಪಿ ಹಾಗೂ ಆರ್ ಎಸ್ ಎಸ್ ನ ಆರಾಧ್ಯ ದೈವ ಎಂಬುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ಮೂರ್ತಿ ಕೆಡವಿ, ಸಂವಿಧಾನ ಸುಟ್ಟು ಹಾಕಬೇಕು ಎಂದವರು ಇಂದು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿರು. ಸದ್ಯ ಸಂವಿಧಾನ ಕೋಮುವಾದಿಗಳ ಕೈಯಲ್ಲಿದೆ. ಅದನ್ನು ರಕ್ಷಣೆ ಮಾಡುವಂತ ಕೆಲಸವಾಗಬೇಕು ಎಂಬುದಾಗಿ ತಿಳಿಸಿದರು.
ಇನ್ನೂ ಮುಂದುವರೆದು ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಯವರನ್ನು ಕೊಂದ ಮತಾಂಧ ಗೂಡ್ಸೆ ಬಿಜೆಪಿ ಮತ್ತು ಆರ್ ಎಸ್ ಎಸ್ ಆರಾಧ್ಯ ದೈವನಾಗಿದ್ದಾನೆ. ಸಮಾಜದಲ್ಲಿ ಜಾತಿ ಒಡೆದು, ಕೋಮು ಗಲಭೆ ಮೂಡಿಸುವುದೇ ಬಿಜೆಪಿ ಪಕ್ಷದ ಕೆಲಸವಾಗಿದೆ ಎಂಬುದಾಗಿ ಬಿಜೆಪಿ ವಿರುದ್ಧ ಕಿಡಿಕಾರಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
