ಕೊರಟಗೆರೆ
ಗೊಲ್ಲ ಸಮುದಾಯದ ಕರ್ನಾಟಕ ರಾಜ್ಯದ ಏಕೈಕ ಮಹಿಳಾ ಶಾಸಕಿ ಪೂರ್ಣಿಮಾ ಶ್ರೀನಿವಾಸ್‍ರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಸಚಿವ ಸ್ಥಾನಮಾನ ನೀಡಬೇಕು ಎಂದು ಕೊರಟಗೆರೆ ಬಿಜೆಪಿ ಹಿಂದುಳಿದ ಮೋರ್ಚಾ ಉಪಾಧ್ಯಕ್ಷ ಸಿ.ಟಿ.ತಿಪ್ಪೆಕರಿಯಪ್ಪ ಪ್ರಕಟಣೆಯಲ್ಲಿ ಗುರುವಾರ ರಾಜ್ಯ ಸರಕಾರಕ್ಕೆ ಆಗ್ರಹ ಮಾಡಿದ್ದಾರೆ.
ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಯ ಲೋಕಸಭಾ ಬಿಜೆಪಿ ಅಭ್ಯರ್ಥಿ ಮತ್ತು ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲು ಹಿರಿಯೂರು ಶಾಸಕಿ ಪೂರ್ಣಿಮಾ ಪ್ರಭಾವ ಕಾರಣವಾಗಿದೆ. ಗೊಲ್ಲ ಸಮುದಾಯದ ಏಕೈಕ ಶಾಸಕಿಗೆ ಉನ್ನತ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಪಕ್ಷಕ್ಕೆ ಗೊಲ್ಲ ಸಮುದಾಯ ಸಂಪೂರ್ಣ ಬೆಂಬಲ ನೀಡಿದೆ. ಮಹಿಳಾ ಶಾಸಕಿ ಪೂರ್ಣಿಮಾಗೆ ಸಚಿವ ಸ್ಥಾನ ನೀಡುವುದರ ಜೊತೆ ಪ್ರತ್ಯೇಕವಾಗಿ ಗೊಲ್ಲರ ಅಭಿವೃದ್ದಿ ನಿಗಮ ಮಂಡಳಿಯನ್ನು ಸ್ಥಾಪಿಸಿ ಗೊಲ್ಲ ಸಮುದಾಯದ ಅಭಿವೃದ್ದಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ