ಹುಳಿಯಾರು
ಹುಳಿಯಾರು ಹೋಬಳಿಯಲ್ಲಿ ಮಂಗಳವಾರ ರಾತ್ರಿ ಗುಡುಗು, ಮಿಂಚು, ಸಿಡಿಲು ಸಹಿತ ಧಾರಾಕಾರ ಮಳೆಯಾಗಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದೆ.
ಮಂಗಳವಾರ ರಾತ್ರಿ 12.30 ಗಂಟೆ ಸುಮಾರಿಗೆ ಆರಂಭವಾದ ಮಳೆ ಸುಮಾರು 45 ನಿಮಿಷ ಎಡಬಿಡದೆ ಸುರಿಯಿತು. ಗುಡುಗು ಸಿಡಿಲಿನ ಅಬ್ಬರ ಜೋರಾಗಿತ್ತು. ಪರಿಣಾಮ ರಾತ್ರಿ ಎರಡು ಗಂಟೆಗಳಿಗೂ ಹೆಚ್ಚು ಕಾಲ ವಿದ್ಯುತ್ ಸಂಪರ್ಕ ಕಡಿತಗೊಂಡಿತು. ವರ್ಷದ ಮೊದಲ ಮಳೆ ಭೂಮಿಗೆ ತಂಪು ತಂದಿತು. ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನರಿಗೆ ಮಳೆ ಹಿತಾನುಭವ ನೀಡಿತು. ಕೃಷಿಕರ ಮೊಗದಲ್ಲಿ ಮಂದಹಾಸ ಮೂಡಿಸಿತ್ತು. ಗಾಳಿಗೆ ಅಲ್ಲಲ್ಲಿ ಮರಗಳು ಧರೆಗುರುಳಿದ ಬಗ್ಗೆ ವರದಿಯಾಗಿದ್ದು ಬಿಟ್ಟರೆ ಮತ್ಯಾವ ಅನಾಹುತ ಜರುಗಿಲ್ಲ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








