ಜನರ ಮನೆಬಾಗಿಲಿಗೆ ಸರ್ಕಾರಿ ಸೌಲಬ್ಯಕ್ಕೆ ಕ್ರಮ : ಜಿಲ್ಲಾಧಿಕಾರಿ

ಚಿತ್ರದುರ್ಗ

    ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಹಲವಾರು ಕ್ಷೇತ್ರಗಳಲ್ಲಿ ಗಣನೀಯವಾದ ಸಾಧನೆ ಮಾಡಿದೆ. ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಮೂಲಕ ಜನರಿಗೆ ದೊರೆಯಬೇಕಾದ ಸರ್ಕಾರಿ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯವನ್ನು ಕೈಗೊಳ್ಳಲು ಶ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಹೇಳಿದರು.

    ಜಿಲ್ಲಾಡಳಿತದ ವತಿಯಿಂದ ನಗರದ ಮುರುಘಾ ರಾಜೇಂದ್ರ ಕ್ರೀಡಾಂಗಣ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಭಾನುವಾರ 71ನೇ ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶ ನೀಡಿದರು.

   ಭಾರತವನ್ನು 1950 ರ ಜ. 26 ರಂದು ಗಣರಾಜ್ಯವೆಂದು ಘೋಷಿಸಲಾಯಿತು, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರಚಿತ ಸಂವಿಧಾನ ಜಾರಿಗೊಂಡಿತು. ಸಂವಿಧಾನ ರಚನಾ ಸಮಿತಿಯಲ್ಲಿ ಚಿತ್ರದುರ್ಗ ಜಿಲ್ಲೆಯವರಾದ ಎಸ್. ನಿಜಲಿಂಗಪ್ಪ ಅವರು ಕೂಡ ಕಾರ್ಯ ನಿರ್ವಹಿಸಿರುವುದು ಜಿಲ್ಲೆಗೆ ಗೌರವ ತರುವ ಸಂಗತಿಯಾಗಿದೆ. ಇಂದಿನ ಯುವ ಪೀಳಿಗೆ ಮತ್ತು ಮಕ್ಕಳು ಸಂವಿಧಾನದ ತತ್ವಗಳನ್ನು ಓದಿ, ಅದನ್ನು ಜೀವನದಲ್ಲಿ ಸಮರ್ಪಕವಾಗಿ ಅಳವಡಿಸಿಕೊಳ್ಳುವುದು ಮತ್ತು ಪಾಲಿಸುವುದು ಅವಶ್ಯಕವಾಗಿದೆ ಎಂದರು
ಪ್ರಜಾಪ್ರಭುತ್ವ ಕೇವಲ ಸರ್ಕಾರದ ವಿಧಾನವಲ್ಲ, ಅದು ಎಲ್ಲರ ಜೀವನದ ವಿಭಾಗವೂ ಆಗಿದೆ. ಹಲವು ಭಾಷೆ, ಸಂಸ್ಕøತಿ, ಧರ್ಮ, ಜಾತಿ, ಜನಾಂಗ ಹೊಮದಿರುವ ಭಾರತ ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ್ದು, ಸಂವಿಧಾನದ ಮೂಲಕ ನಮ್ಮೆಲ್ಲರನ್ನೂ ದೇಶ ಒಗ್ಗೂಡಿಸಿದೆ ಎಂದರು.

    ನಮ್ಮ ದೇಶ ಕೃಷಿಯಲ್ಲಿ ಸ್ವಾವಲಂನೆ, ಕೈಗಾರಿಕೋದ್ಯಮದಲ್ಲಿ ಸಫಲತೆ, ತಲಾ ಆದಾಯದಲ್ಲಿ ಏರಿಕೆ, ಶೈಕ್ಷಣಿಕ ಪ್ರಗತಿ, ಸಾರಿಗೆ ಸಂಪರ್ಕ, ತಂತ್ರಜ್ಞಾನ, ವಿಜ್ಞಾನ, ಮಾಹಿತಿ ತಂತ್ರಜ್ಞಾನ ಹೀಗೆ ಹಲವು ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದ್ದು, ಅಂತರ ರಾಷ್ಟ್ರೀಯ ಮಟ್ಟದಲ್ಲಿ ಹಿರಿಮೆಯನ್ನು ಹೆಚ್ಚಿಸಿಕೊಂಡಿದೆ. ಜಿಲ್ಲೆ ರಾಜ್ಯದಲ್ಲಿ ಒಂದು ವಿಶಿಷ್ಟ ಜಿಲ್ಲೆಯಾಗಿದೆ. ಜಿಲ್ಲೆಯ ವಿವಿಧ ಇಲಾಖೆಗಳ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಮೂಲಕ ಮಾದರಿ ಜಿಲ್ಲೆಯನ್ನಾಗಿ ಮಾಡಲು ನಾವೆಲ್ಲರೂ ಕಂಕಣ ಬದ್ಧರಾಗಿ ಶ್ರಮಿಸೋಣ ಎಂದು ಕರೆ ನೀಡಿದರು

    ಜಿಲ್ಲೆಯಲ್ಲಿ ಪ್ರತಿಯೊಬ್ಬ ನಾಗರಿಕನಿಗೆ ಮೂಲಭೂತ ಸೌಲಭ್ಯಗಳಾದ ಶಿಕ್ಷಣ, ರಸ್ತೆ, ಕುಡಿಯುವ ನೀರು, ಮಹಿಳಾ ಮಕ್ಕಳ ಅಭಿವೃದ್ಧಿ ಯೋಜನೆಗಳು, ಇನ್ನಿತರೆ ರಾಜ್ಯ ಮತ್ತು ಕೇಂದ್ರ ಸರ್ಕಾರವು ನೀಡಿರುವ ಸವಲತ್ತುಗಳನ್ನು ತಲುಪಿಸುವಲ್ಲಿ ಜಿಲ್ಲಾಡಳಿತ ಅವಿರತವಾಗಿ ಶ್ರಮಿಸುತ್ತಿದೆ. ದೇಶದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ ಅಭಿವೃದ್ಧಿಯಲ್ಲಿ ಯುವಜನತೆಯ ಕೊಡುಗೆಯು ಅಪಾರವಾಗಿದ್ದು, ದೇಶದ ಅಭಿವೃದ್ಧಿ ಜೊತೆ ಜೊತೆಯಲ್ಲಿ ಸಮಾಜದ ಅಭಿವೃದ್ಧಿಯನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿ ಮಾಡಿದ್ದು, ಅಂತಹ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಲು ಗ್ರಾಮಗಳ ಹಂತದಲ್ಲಿ ಹಲವಾರು ಆರ್ಥಿಕ ಸಾಕ್ಷರತಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು

    ಸಮಾರಂಭದಲ್ಲಿ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ, ಜಿ.ಪಂ. ಅಧ್ಯಕ್ಷೆ ವಿಶಾಲಾಕ್ಷಿ ನಟರಾಜ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿ. ಸತ್ಯಭಾಮ, ಜಿಲ್ಲಾ ರಕ್ಷಣಾಧಿಕಾರಿ ಡಾ. ಅರುಣ್, ಅಪರ ಜಿಲ್ಲಾಧಿಕಾರಿ ಸಂಗಪ್ಪ, ಉಪವಿಭಾಗಾಧಿಕಾರಿ ಪ್ರಸನ್ನ, ತಹಸಿಲ್ದಾರ್ ವೆಂಕಟೇಶಯ್ಯ, ನಗರಸಭೆ ಪೌರಾಯುಕ್ತ ಜೆ.ಟಿ. ಹನುಮಂತರಾಜು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link