ಬೆಂಗಳೂರು
ಹಿಂದಿನ ಆಯುಕ್ತರು ಮೇಯರ್ ಅವಯಲ್ಲಿ ಭಾರೀ ಅವ್ಯವಹಾರ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಲೆಕ್ಕಾಕಾಧಿರಿ ಕಚೇರಿಗೆ ಗೌರವ್ ಗುಪ್ತ ಅವರು ಬೀಗ ಮುದ್ರೆ ಹಾಕಿದ್ದಾರೆ.
ಮುಖ್ಯ ಲೆಕ್ಕಾಕಾರಿಯಾಗಿರುವ ಗೋವಿಂದರಾಜ್ ಅವರು ಈ ಹಿಂದೆ ಬೇಕಾಬಿಟ್ಟಿಯಾಗಿ ಮನಸೋ ಇಚ್ಛೆ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಿದ್ದಾರೆ ಎಂಬ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ದಾಖಲಾತಿಗಳ ಪರಿಶೀಲನೆ ನಡೆಸುವ ಸಂಬಂಧ ಮುಖ್ಯ ಲೆಕ್ಕಾಧಿಕಾರಿ ಕಚೇರಿಗೆ ತೆರಳಿ ದಾಖಲಾತಿಗಳನ್ನು ಸೀಜ್ ಮಾಡಿ ಕಚೇರಿಗೆ ಬೀಗ ಜಡಿಯಲಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿರುವ ಕಾಮಗಾರಿಗಳಿಗೆ ಮನಸೋ ಇಚ್ಛೆ ಹಣ ಬಿಡುಗಡೆ ಮಾಡಲಾಗಿದೆ. ವ್ಯಾಪಕ ಅವ್ಯವಹಾರ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದ್ದವು.ಹೀಗಾಗಿ ದಾಖಲೆಗಳನ್ನು ಪರಿಶೀಲನೆ ಮಾಡಬೇಕಿದೆ. ಮರು ಆಡಿಟ್ ಕೂಡ ಮಾಡಬೇಕಿದೆ. ಮುಖ್ಯ ಲೆಕ್ಕಾಧಿಕಾರಿ ಕಚೇರಿಗೆ ಬೀಗಮುದ್ರೆ ಹಾಕಿರುವುದು ತೀವ್ರ ಕುತೂಹಲ ಕೆರಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
