ಸರ್ಕಾರದಿಂದ ದೇವರಾಜ ಅರಸು ಅವರಿಗೆ ಅವಮಾನ : ಸಿದ್ದರಾಮಯ್ಯ

ಬೆಂಗಳೂರು

    ಎರಡು ವರ್ಷಗಳಿಂದ ಪ್ರತಿಷ್ಠಿತ ‘ದೇವರಾಜ ಅರಸು ಪ್ರಶಸ್ತಿ’ ಪ್ರದಾನ ಮಾಡದೆ ನಾಡಿನ ಹೆಮ್ಮೆಯ ನಾಯಕನಿಗೆ ಅಗೌರವ ತೋರಿದ ರಾಜ್ಯದ ಬಿಜೆಪಿ ಸರ್ಕಾರದ ನಡೆ ಖಂಡನೀಯ. ಅರಸು ಅವರಿಗೆ ಅಗೌರವ ತೋರಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಅರಸು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಯಾವ ನೈತಿಕ ಹಕ್ಕಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

      ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿಯವರೆ, ಡಿ.ದೇವರಾಜ ಅರಸು ಅವರ ಮೇಲೆ ನಿಮಗೆ ಒಂದಿಷ್ಟಾದರೂ ಗೌರವ ಇದ್ದರೆ, ಮೊದಲು ಅವರು ಜಾರಿಗೆ ತಂದಿದ್ದ ‘ಉಳುವವನನ್ನೇ ಭೂ ಒಡೆಯನನ್ನಾಗಿ ಮಾಡುವ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿ ಉಳ್ಳವನಿಗೆ ಭೂಮಿ ನೀಡಲು ಹೊರಟಿರುವ ನಿಮ್ಮ ತೀರ್ಮಾನವನ್ನು ಹಿಂದಕ್ಕೆ ಪಡೆಯಿರಿ’ ಎಂದು ಸವಾಲು ಹಾಕಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap