ರಾಜ್ಯ ಸರ್ಕಾರದಿಂದ ಕೊಬ್ಬರಿಗೆ ರೂ.1000 ಬೆಂಬಲ ಬೆಲೆ ಘೋಷಣೆ

ತಿಪಟೂರು

   ಆಗಸ್ಟ್ 6 ರ ಬೆಳಗ್ಗೆ ನಫೆಡ್‍ನತ್ತ ಮುಖಹಾಕದ ರೈತರು, ಕೊಬ್ಬರಿ ಬೆಳೆಗಾರರ ಮೌನ ಪ್ರತಿಭಟನೆಯೇ ಎಂಬ ಅಡಿಬರಹದಲ್ಲಿ ಮೂಡಿಬಂದ ಲೇಖನದಿಂದ ಸಂಜೆಯೊಳಗೆ ರಾಜ್ಯದಲ್ಲಿ ಸಂಕಷ್ಟದಲ್ಲಿರುವ ರೈತರಿಗೆ ಹೆಚ್ಚಿನ ನೆರವು ಒದಗಿರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದ್ದು, ಉಂಡೆಕೊಬ್ಬರಿಗೆ ಹೆಚ್ಚಿನ ಪೆÇ್ರೀತ್ಸಾಹಧನ ನೀಡಲು ರಾಜ್ಯ ಸರ್ಕಾರ ನಿರ್ಧಾರಿಸಿದೆ.

    ವಿಧಾನಸೌಧದಲ್ಲಿ ಗುರುವಾರ ನಡೆದ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಬೆಲೆ ಸ್ಥಿರೀಕರಣ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಂಡಿರುವುದಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು. ಕೇಂದ್ರ ಸರ್ಕಾರ ಉಂಡೆಕೊಬ್ಬರಿಗೆ ಕ್ವಿಂಟಲ್‍ಗೆ ರೂ. 10,300 ಬೆಂಬಲಬೆಲೆ ನಿಗದಿ ಮಾಡಿತ್ತು. ರೈತರಿಗೆ ಇನ್ನೂ ಹೆಚ್ಚಿನ ಬೆಂಬಲ ಬೆಲೆ ಸಿಗಬೇಕು ಎಂಬ ಕಾರಣಕ್ಕೆ, ರೈತರ ಬೇಡಿಕೆ ಮನ್ನಿಸಿ, ಕ್ವಿಂಟಲ್‍ಗೆ ರೂ. 1,000 ನೀಡಲು ತೀರ್ಮಾನಿಸಲಾಯಿತು. ಈ ಮೊತ್ತವನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಇದರಿಂದ ಪ್ರತಿ ರೈತರಿಗೆ ಒಂದು ಕ್ವಿಂಟಲ್‍ಗೆ ರೂ. 11,300 ಬೆಂಬಲ ಬೆಲೆ ಸಿಕ್ಕಂತಾಗುತ್ತದೆ ಎಂದು ಅವರು ಹೇಳಿದರು.

   ಇದಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನಲ್ಲಿ ಆಗಸ್ಟ್ 10ರ ಸೋಮವಾರ ಕೊಬ್ಬರಿ ಬೆಂಬಲ ಬೆಲೆಯನ್ನು 15000ಕ್ಕೆ ಏರಿಸಬೇಕೆಂದು ರೈತಸಂಘ ಮತ್ತಿತರ ಸಂಘಟನೆಗಳು ಎಪಿಎಂಸಿಯಿಂದ ಉಪವಿಭಾಗಾಧಿಕಾರಿಗಳ ಕಛೆರಿಯವೆರೆಗೆ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ. ಇದರ ನಡುವೆ ರಾಜ್ಯ ಸರ್ಕಾರ ಬೆಂಬಲ ಬೆಲೆಯನ್ನು ಕೊಡುತ್ತಿರುವುದರಿಂದ ಮಾರುಕಟ್ಟೆಯಲ್ಲಿ ಸ್ವಲ ಬೆಲೆ ಏರಿಕೆಯಾಗಬಹುದೆಂದು ರೈತರ ಮನಸ್ಸಿನಲ್ಲಿ ಸ್ವಲ್ಪ ಸಂತೋಷವನ್ನು ಉಂಟುಮಾಡಿದೆ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link