ಜಿಲ್ಲಾ ಮಟ್ಟದ ಕ್ರೀಡಾಕೂಟ

ಹಾವೇರಿ –

        ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಸರಕಾರಿ ನೌಕರರಿಗಾಗಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಹಾನಗಲ್ ತಾಲೂಕಿನ ಶ್ರೀಮತಿ ಶ್ವೇತಾ ಎಸ್ ನಾಯಕ,ಶ್ರೀಮತಿ ಸುಜಾತ ಮೂಗೂರು ,ಶ್ರೀಮತಿ ಮಂಗಳಾ ಕರಡಿ ಹಾಗೂ ಶ್ರೀಮತಿ ಮೈತ್ರಿ ಇವರಿದ್ದ ಮಹಿಳಾ ನೌಕರರ ತಂಡವು 4×100 ಮೀಟರ್ ರಿಲೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜನೇವರಿ 28,29 ಮತ್ತು 30 ರಂದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿದ್ದಾರೆ .

       ಈ ತಂಡಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಕ್ರೀಡಾ ಇಲಾಖೆಯ ಆಧಿಕಾರಿಗಳು , ರಾಜ್ಯ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ರಾಜ್ಯ ಶಿಕ್ಷಕರ ಸಂಘವು ಹಾಗೂ ನೌಕರರು ಅಭಿನಂದನೆ ಸಲ್ಲಿಸಿ ಹರ್ಷ ವ್ಯಕ್ತಪಡಿಸಿದ್ದಾರೆ

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link