ಜನನ ಮರಣ ಪ್ರಮಾಣ ಪತ್ರ : ಪಿಡಿಓಗಳಿಗೆ ಅಧಿಕಾರ ನೀಡಿದ ಸರ್ಕಾರ

ಬೆಂಗಳೂರು

    ಜನನ ಮರಣ ಪ್ರಮಾಣ ಪತ್ರ ನೀಡುವ ಅಧಿಕಾರವನ್ನು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಈ ಮೊದಲು ಜನನ-ಮರಣ ಪ್ರಮಾಣ ಪತ್ರ ವಿತರಣಾ ಹಕ್ಕು ಕಂದಾಯ ಇಲಾಖೆ ವ್ಯಾಪ್ತಿಯಲ್ಲಿತ್ತು. ಇದೀಗ ಗ್ರಾಮಪಂಚಾಯತ್‍ಗಳಿಗೆ ಹಕ್ಕು ನೀಡಿ ಸರ್ಕಾರ ಆದೇಶಿಸಿದೆ.ಯೋಜನಾ ಮತ್ತು ಸಾಂಖ್ಯಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಜನನ-ಮರಣ ಪ್ರಮಾಣ ಪತ್ರ ವಿತರಣೆಯನ್ನು ಗ್ರಾಮಪಂಚಾಯಿತಿಗೆ ನೀಡಬಹುದು ಎಂದು ಸೂಚಿಸಿದ್ದರು.

     ಪಂಚಾಯುತ್ ಅಭಿವೃದ್ಧಿ ಅಧಿಕಾರಿಗಳನ್ನು ಜನನ-ಮರಣ ಪ್ರಮಾಣ ಪತ್ರಗಳ ವಿತರಣಾಧಿಕಾರಿಗಳನ್ನಾಗಿ ನೇಮಿಸಲು ಅನುಮತಿ ನೀಡಿರುವುದರಿಂದ, ರಾಷ್ಟ್ರೀಯ ಜನನ-ಮರಣ ಕಾಯ್ದೆ 1969 ರ ಆಧ್ಯಾಯ 5 ರ ಪ್ರಕರಣ 27 ರಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಇ – ತಂತ್ರಾಂಶದಲ್ಲಿ ತಮ್ಮ ಡಿಜಿಟಲ್ ಸಹಿಯ ಮುಖಾಂತರ ವ್ಯಕ್ತಿಗಳ ಜನನ ಮತ್ತು ಮರಣ ಪ್ರಮಾಣ ಪತ್ರ ವಿತರಣಾಧಿಕಾರಿಗಳನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರ ನೇಮಿಸಿದೆ.

    ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಬಾಪೂಜಿ ಸೇವಾ ಕೇಂದ್ರಗಳ ಮುಖಾಂತರ ಈ ಸೇವೆಯನ್ನು ನೀಡಬೇಕು. ಸರ್ಕಾರ ಆಗಿಂದಾಗ್ಗೆ ನಿಗದಿ ಪಡಿಸುವ ದರಗಳನ್ವಯ ಸೇವಾ ಶುಲ್ಕವನ್ನು ಸಂಗ್ರಹಿಸಿ ನೀಡುವಂತೆ ಆದೇಶದಲ್ಲಿ ಹೇಳಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap