ಅನುದಾನ ಬಳಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲ: ಬಿಜೆಪಿ

ಬೆಂಗಳೂರು

       ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಸ್ಮಾರ್ಟ್ ಸಿಟಿ ಯೋಜನೆಗೆ ಬಿಡುಗಡೆಗೊಳಿಸಿದ ?ಅನುದಾನವನ್ನು ಬಳಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿರುವುದನ್ನು ರಾಜ್ಯ ಬಿಜೆಪಿ ಕಟುವಾಗಿ ಟೀಕಿಸಿದೆ.

        ಸ್ಮಾರ್ಟ್ ಸಿಟಿ ಯೋಜನೆಗೆ ಕೇಂದ್ರ ಸರ್ಕಾರ ರಾಜ್ಯಕ್ಕೆ 886 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ರಾಜ್ಯ ಸರ್ಕಾರ ಕೇವಲ 86.02 ಕೋಟಿ ರೂ.ಗಳನ್ನಷ್ಟೇ ಬಳಕೆ ಮಾಡಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಮತ್ತು ಬಿಜೆಪಿ ಸಹವಕ್ತಾರ ಎ.ಹೆಚ್.ಆನಂದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

       ಪತ್ರಿಕಾ ಪ್ರಕಟಣೆ ಮೂಲಕ ಸರ್ಕಾರದ ನಡೆಯನ್ನು ವಿರೋಧಿಸಿರುವ ಅವರು, ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಯಾವುದೇ ರೀತಿಯ ಸಹಾಯ ಮಾಡುತ್ತಿಲ್ಲ ಎಂದು ಆರೋಪಿಸುತ್ತಿದ್ದರು. ಇದೀಗ ರಾಜ್ಯ ಸರ್ಕಾರ ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯಕ್ಕೆ ಸಲ್ಲಿಸಿದ್ದ ಹಣಕಾಸು ವಿನಿಯೋಗ ಪತ್ರದಲ್ಲಿ ಕೇವಲ 86.08 ಕೋಟಿ ಅನುದಾನವನ್ನು ಬಳಕೆ ಮಾಡಿಕೊಂಡಿರುವುದು ಬಹಿರಂಗವಾಗಿದ್ದು, ಇದಕ್ಕೆ ಯಾರು ಹೊಣೆ ? ಎಂದು ಪ್ರಶ್ನಿಸಿದ್ದಾರೆ.

      ಸ್ಮಾರ್ಟ್ ಸಿಟಿ ಯೋಜನೆಯಡಿ ಪ್ರತಿ ನಗರಕ್ಕೆ ಆಧುನಿಕ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರ 500 ಕೋಟಿ ಆರ್ಥಿಕ ನೆರವು ನೀಡುತ್ತದೆ. ಇದರಡಿ ರಸ್ತೆಗಳು, ಕುಡಿಯುವ ನೀರು, ಕೆರೆಕಟ್ಟೆ, ಸರೋವರಗಳು, ಸೈಕಲ್ ಪಥ ನಿರ್ಮಾಣ, ಸ್ಮಾರ್ಟ್ ತರಗತಿಗಳು, ಆರೋಗ್ಯ ಸೌಲಭ್ಯ ಸೇರಿದಂತೆ ಹಲವು ರೀತಿಯ ಸೌಕರ್ಯಗಳನ್ನು ಬಳಸಿಕೊಂಡಿದ್ದರೆ ರಾಜ್ಯಕ್ಕೆ ಇದರಿಂದ ಹೆಚ್ಚಿನ ಅನುಕೂಲವಾಗುತ್ತಿತ್ತು. ಬಿಡುಗಡೆಯಾದ ಅನುದಾನದಲ್ಲಿ ಶೇ.9.70 ರಷ್ಟನ್ನು ಮಾತ್ರ ವಿನಿಯೋಗಿಸಲಾಗಿದ್ದು, ಇದರಲ್ಲಿನ ಅರ್ಧಭಾಗವನ್ನು ಕಚೇರಿ ಮತ್ತು ಆಡಳಿತಾತ್ಮಕ ವೆಚ್ಚಕ್ಕೆ ಬಳಕೆ ಮಾಡಲಾಗಿದೆ. ಇದೆಲ್ಲವನ್ನು ನೋಡಿದರೆ ಈಗಿನ ಮತ್ತು ಹಿಂದಿನ ಸರ್ಕಾರದ ಸಚಿವರು ಎಷ್ಟರ ಮಟ್ಟಿಗೆ ಸ್ಮಾರ್ಟ್ ಸಿಟಿ ಯೋಜನೆ ಬಗ್ಗೆ ಆಸಕ್ತಿವಹಿಸಿದ್ದಾರೆ ಎನ್ನುವುದು ಸಾಬೀತಾಗಿದೆ ಎಂದಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link