ಕೊರೋನಾ ನಿರ್ವಹಣೆ: ಪ್ರಾರಂಭದಲ್ಲೇ ಸರ್ಕಾರ ವಿಫಲ : ಎಚ್ ಡಿ ಕೆ

ಬೆಂಗಳೂರು

    ಆರಂಭಿಕ ಹಂತದಲ್ಲೇ ಕೋವಿಡ್-19 ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಅವರು, ಇದರಿಂದ ಕೊರೋನಾ ಸೋಂಕು ಪೀಡಿತರು ಬೆಡ್ ಗಳಿಲ್ಲದೆ, ಚಿಕಿತ್ಸೆ ಇಲ್ಲದೆ ಮನೆಯಲ್ಲೇ ನರಳಿ ಸಾಯುತ್ತಿದ್ದಾರೆ. ಕಳೆದ ಮೂರು ತಿಂಗಳಿಂದ ಮುಖ್ಯಮಂತ್ರಿ ಸೇರಿದಂತೆ ಸಚಿವರು ಮಾತಿನ ಮಂಟಪ ಕಟ್ಟುವುದರಲ್ಲಿ ಕಾಲ ಕಳೆದರು ಎಂದು ಟೀಕಾಪ್ರಹಾರ ನಡೆಸಿದ್ದಾರೆ.

    ಸರ್ಕಾರ ಈಗ ಇಂಗು ತಿಂದ ಮಂಗನಂತಾಗಿದ್ದು, ಸೋಂಕಿತರ ಸಂಖ್ಯೆಯ ಗಣನೀಯ ಏರಿಕೆಯನ್ನು ತಡೆಯಲು ಪೇಚಾಡುತ್ತಿದೆ. ನೆರೆಯ ಕೇರಳ ಸರ್ಕಾರ ಕೊರೋನ ತಡೆಗೆ ಕೈಗೊಂಡ ಕ್ರಮಗಳ ‘ಸಿದ್ದ’ ಮಾದರಿ ಕಣ್ಣೆದುರಿಗಿದೆ. ರಾಜ್ಯದ ಸಚಿವರಲ್ಲಿ ಸಮನ್ವಯವಿಲ್ಲ, ಒಬ್ಬೊಬ್ಬರದು ಒಂದೊಂದು ನಿಲುವು. ಇವರ ತಿಕ್ಕಾಟದಲ್ಲಿ ರಾಜ್ಯದ ಜನತೆ ಹೈರಾಣಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

     ಕೊರೋನಾ ಸೋಂಕು ಶರವೇಗದಲ್ಲಿ ಎಲ್ಲೆಡೆ ವ್ಯಾಪಿಸುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ರಾಜ್ಯದಾದ್ಯಂತ ಸೋಂಕಿತರು ಚಿಕಿತ್ಸೆಯಿಲ್ಲದೆ ಸಾಯುತ್ತಿರುವ ಘಟನೆಗಳು ಕರುಳು ಹಿಂಡುತ್ತಿವೆ. ಸರ್ಕಾರ ಇನ್ನೂ ಮೈಮರೆತರೆ ಸೋಂಕಿತರು ಬೀದಿ ಬೀದಿಯಲ್ಲಿ ಸಾಯುವ ಸ್ಥಿತಿ ನಿರ್ಮಾಣವಾಗುತ್ತದೆ.ಸರ್ಕಾರ ಇನ್ನಾದರೂ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಲಿ. ಕೊರೋನಾ ಸಮರ್ಪಕ ನಿರ್ವಹಣೆಗೆ ನಾನು ಕೊಟ್ಟ ಹತ್ತಾರು ಸಲಹೆಗಳನ್ನು ಲಘುವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಇನ್ನಾದರೂ ಎಚ್ಚೆತ್ತುಕೊಳ್ಳಲಿ ಎಂದು ಟ್ವೀಟ್ ಮೂಲಕ ಸಲಹೆ ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap