ಬೆಂಗಳೂರು: 
ಕೊರೋನಾ ನಿಯಂತ್ರಣ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ, ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೆಪದಲ್ಲಿ ಲೂಟಿ ಹೊಡೆಯುತ್ತಿವೆ ಸರ್ಕಾರ, ಆರೋಗ್ಯ ಇಲಾಖೆ ಏನು ಮಾಡುತ್ತಿದೆ? ಎಂದು ಆಡಳಿತ ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರಶ್ನೆ ಮಾಡಿದ್ದಾರೆ.
ಇಂದು ವಿಧಾನಸಭೆಯಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ಸಂತಾಪ ನಿರ್ಣಯ ಚರ್ಚೆಯ ಮೇಲೆ ಮಾತನಾಡಿದ ಯತ್ನಾಳ್, ತಮ್ಮ ಅನಭವವನ್ನು ಎಳೆ, ಎಳೆಯಾಗಿ ಕೇಲವೇ ನಿಮಿಷದಲ್ಲಿ ಸದನ ಮುಂದೆ ಬಿಚ್ಚಿಟ್ಟರು. ನನಗೆ ಹೀಗಾದರೆ ಜನ ಸಾಮಾನ್ಯರ ಪಾಡೆನು? ಸರ್ಕಾರ, ಆರೋಗ್ಯ ಇಲಾಖೆ ಏನು ಮಾಡುತ್ತಿದೆ ಎಂದರು.
ಬಸವನಗೌಡ ಪಾಟೀಲ್ ಯತ್ನಾಳ್, ಸುರೇಶ್ ಅಂಗಡಿ ನಿಧನದಿಂದ ಆಘಾತಗೊಂಡಿದ್ದೇನೆ. ಏಮ್ಸ್ ನಂತಹ ದೊಡ್ಡ ಸಂಸ್ಥೆಯಲ್ಲಿಯೇ ಅವರ ಜೀವ ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದರೆ ನಾವು ಕೋವಿಡ್ ಬಗ್ಗೆ ಗಂಭೀರವಾಗಿ ಚಿಂತಿಸಬೇಕಾಗಿದೆ. ವಾರಕ್ಕೆ ಎರಡು ಬಾರಿ ಲಾಕ್ ಡೌನ್ ಮಾಡಬೇಕಾದ ಪರಿಸ್ಥಿತಿ ಬಂದಿದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








