ಪದವೀಧರರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಿಲ್ಲ

ಕುಣಿಗಲ್

    ಪದವಿಧರರ ನಿರುದ್ಯೋಗಿಗಳು ಹಾಗೂ ಖಾಸಗಿ ಮತ್ತು ಅನುದಾನರಹಿತ ಶಾಲಾ ಶಿಕ್ಷಕರ ಸಮಸ್ಯೆಗಳಿಗೆ ಬಿಜೆಪಿ ಸರಕಾರ ಸ್ಪಂದಿಸದೆ ನಿರ್ಲಕ್ಯ ಮಾಡಿದೆ ಎಂದು ಸಂಸದ ಡಿ.ಕೆ.ಸುರೇಶ್ ಆರೋಪಿಸಿದರು. ಬುಧವಾರ ಪಟ್ಟಣದ ಸಂಸದರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗ್ನೇಯ ಪದವಿಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಒಮ್ಮತದ ಅಭ್ಯರ್ಥಿಯಾಗಿ ಪ್ರಮಾಣಿಕ ಸರಳ ಸಜ್ಜನಿಕೆಯ ವ್ಯಕ್ತಿ ರಮೇಶ್ ಬಾಬು ಅವರನ್ನು ಕಣಕ್ಕೆ ಇಳಿಸಲಾಗಿದೆ.

    ತುಮಕೂರು. ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ ಸೇರಿದಂತೆ ಐದು ಜಿಲ್ಲೆಗಳು ಸೇರಿರುವ ಆಗ್ನೇಯ ಪದವಿಧರ ಕ್ಷೇತ್ರದಲ್ಲಿ ಪದವಿಧರರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡುವ ವಾತಾವರಣ ನಿರ್ಮಾಣ ಮಾಡಲು ಹಾಗೂ ಪದವಿಧರರ ಬಗ್ಗೆ ನಿರ್ಲಕ್ಷ್ಯಸಿರುವ ಬಿಜೆಪಿ ಸರಕಾರಕ್ಕೆ ಪಾಠ ಕಲಿಸಲು ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಾಬು ಅವರಿಗೆ ಮತ ಹಾಕಿ ಜಯಶೀಲರನ್ನಾಗಿ ಮಾಡಬೇಕೆಂದು ಮನವಿ ಮಾಡಿದರು.

    ಆಗ್ನೇಯ ಪದವಿಧರ ಕ್ಷೇತ್ರದಲ್ಲಿ ಸುಮಾರು 1.09 ಲಕ್ಷ ಪದವಿಧರ ಮತದಾರರಿದ್ದಾರೆ. ಈ ಪೈಕಿ ಕುಣಿಗಲ್ ಕ್ಷೇತ್ರದಲ್ಲಿ 1330 ಮತದಾರರಿದ್ದಾರೆ. ಅತೀ ದೊಡ್ಡ ಕ್ಷೇತ್ರವಾಗಿರುವ ಕಾರಣ ಎಲ್ಲಾ ಮತದಾರರನ್ನು ಖುದ್ದು ಭೇಟಿ ಮಾಡಿ ಮತಯಾಚನೆ ಮಾಡುವುದು ಕಷ್ಟವಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲಾ ಪದವಿಧರ ಮತದಾರರು ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಾಬುರವರಿಗೆ ಮತ ಚಲಾವಯಿಸಬೇಕೆಂದು ಕೋರದರು.

     ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೇ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದ ಡಿ.ಕೆ.ಸುರೇಶ್, ರಾಜರಾಜೇಶ್ವರಿ ನಗರದ ಬಿಜೆಪಿ ಅಭ್ಯರ್ಥಿ ತಮ್ಮ ವಯಕ್ತಿಕ ಅಭಿವೃದ್ದಿ ಮಾಡಿಕೊಳ್ಳುವ ಮೂಲಕ ಕ್ಷೇತ್ರದ ಅಭಿವೃದ್ದಿಯನ್ನು ಮೂಲೆ ಗುಂಪು ಮಾಡಿದ್ದಾರೆ. ಈ ಸಂಬಂಧ ನಮಗೆ ಜೆಡಿಎಸ್ ಅಭ್ಯರ್ಥಿಯೊಂದಿಗೆ ಪೈಪೋಟಿ ಏರ್ಪಟ್ಟಿದೆ. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಗೆಲ್ಲುವುದು ಖಚಿತ ಎಂದು ತಿಳಿಸಿದರು.

     ಆಗ್ನೇಯ ಪದವಿಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಾಬು ಮಾತನಾಡಿ, ಪದವಿಧರ ನಿರುದ್ಯೋಗಿಗಳು ಹಾಗೂ ಸೇವಾ ಭದ್ರತೆ ಇಲ್ಲದೇ ಕಾಸಗಿ ಹಾಗೂ ಅನುದಾನ ರಹಿತ ಶಾಲಾ ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹೋರಾಟ ಮಾಡಲು ನಾನು ಸದಾ ಸಿದ್ದನಿದ್ದೇನೆ. ಅವರ ಕಷ್ಟಗಳಿಗೆ ಸ್ಪಂದಿಸಿ ಪ್ರಮಾಣಿಕವಾಗಿ ಕೆಲಸ ಮಾಡುತ್ತೇನೆ ಭರವಸೆ ನೀಡಿದರು.
ಶಾಸಕ ಡಾ.ರಂಗನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಣ್ಣಗೌಡ, ಪುರಸಭೆ ಸದಸ್ಯರಾದ ರಂಗಸ್ವಾಮಿ, ಅರುಣ್ ಕುಮಾರ್, ಎಸ್.ಕೆ.ನಾಗೆಂದ್ರ ಮುಂತಾದವರು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap