ಸುಳ್ಳು ಮೊಕ್ಕದಮೆ ದಾಖಲಿಸುವುದನ್ನು ಸರ್ಕಾರ ಕೈ ಬಿಡಬೇಕು : ಸಿದ್ದರಾಮಯ್ಯ

ಬೆಂಗಳೂರು

    ಅಭಿವ್ಯಕ್ತಿ ಸ್ವಾತಂತ್ರ ವನ್ನು ದಮನ ಮಾಡಲು ಸಿಎಎ ವಿರುದ್ಧವಾಗಿ ಮಾತನಾಡಿರುವವರ ಮೇಲೆ ಹಾಕಲಾಗಿರುವ ಸುಳ್ಳು ಮೊಕದ್ದಮೆ ಗಳನ್ನು ದಾಖಲಿಸಲಾಗುತ್ತಿರುವುದನ್ನು ರಾಜ್ಯ ಸರ್ಕಾರ ಕೈಬಿಡದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.

    ಬಿಜೆಪಿ ಸರ್ಕಾರವು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತೀರುವುದನ್ನು ಪ್ರತಿಭಟಿಸಿ, ನಗರದ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನಾ ಪ್ರದರ್ಶನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಸಿಎಎ ವಿರುದ್ಧವಾಗಿ ಮಾತನಾಡಿರುವವರ ಮೇಲೆ ಹಾಕಲಾಗಿರುವ ಸುಳ್ಳು ಮೊಕದ್ದಮೆಗಳನ್ನು ತಕ್ಷಣವೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

   ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ಹಾಗೂ ಸಿಎಎ, ಎನ್‍ಪಿಆರ್, ಎನ್‍ಆರ್‍ಸಿ ವಿರುದ್ಧ ದೊಡ್ಡ ಮಟ್ಟದ ಸ್ವಾತಂತ್ರ ಸಂಗ್ರಾಮ ಆಂದೋಲವನ್ನು ನಡೆಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

   ರಾಜ್ಯದ ಜನತೆಯನ್ನು ಎದುರಿಸಲು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು ಯಾವುದೇ ಕಾರಣಕ್ಕೂ ಅದಕ್ಕೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ಪಕ್ಷ ಇದೆನ್ನೆಲ್ಲ ನೋಡಿಕೊಂಡು ಕೈಕಟ್ಟಿ ಸುಮ್ಮನೆ ಕುಳಿತುಕೊಂಡಿದೆ ಎಂದು ಭಾವಿಸಿದರೆ, ಅದು ನಿಮ್ಮ ಭ್ರಮೆಯೆಂದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿದರು.

   ನೀವು(ಯಡಿಯೂರಪ್ಪ) ಎಷ್ಟು ದಿನ ಅಧಿಕಾರದಲ್ಲಿ ಇರುತ್ತೀರೋ ಗೊತ್ತಿಲ್ಲ. ಸಂವಿಧಾನ ಬಾಹಿರವಾಗಿ ಕಾನೂನು ಅನ್ನು ದುರುಪಯೋಗಿ ಪಡಿಸಿಕೊಂಡು ಪೊಲೀಸ್ ಇಲಾಖೆಯ ಮೂಲಕ ಜನರನ್ನು ಜೈಲಿಗೆ ಅಟ್ಟುತ್ತೇನೆ ಎಂದು ಕೊಂಡಿದ್ದರೆ ಅದು ಕೇವಲ ಭ್ರಮೆ ಎಂದು ತರಾಟೆಗೆ ತೆಗೆದುಕೊಂಡರು.

   ಉದ್ದೇಶಿಸಿ ಮಾತನಾಡಿದ ಅವರು ಸರ್ಕಾರವು ಸಿಎಎ ವಿರುದ್ಧವಾಗಿ ಮಾತನಾಡಿರುವವರ ಮೇಲೆ ಹಾಕಲಾಗಿರುವ ಸುಳ್ಳು ಮೊಕದ್ದಮೆಗಳನ್ನು ತಕ್ಷಣವೇ ವಾಪಸ್ ಪಡೆಯಬೇಕು ಎಂದು ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ಹಾಗೂ ಸಿಎಎ, ಎನ್‍ಪಿಆರ್, ಎನ್‍ಆರ್‍ಸಿ ವಿರುದ್ಧ ದೊಡ್ಡ ಮಟ್ಟದ ಸ್ವಾತಂತ್ರ ಸಂಗ್ರಾಮ ಆಂದೋಲವನ್ನು ನಡೆಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

   ಬೀದರ್‍ನ ಶಾಲೆಯಲ್ಲಿ ಸಿಎಎ ವಿರುದ್ಧವಾಗಿ ನಾಟಕಮಾಡಿದರೆ, ಅದು ದೇಶದ್ರೋಹದ ಕೆಲಸವೇ. ಶಾಹೀನ್ ಮೇಲೆ ದೇಶದ್ರೋಹದ ಮೊಕದ್ದಮೆ ಹಾಕುತ್ತಾರೆ. ನೂರಾರು ಮಕ್ಕಳನ್ನು ವಿಚಾರಣೆಗೆ ಒಳಪಡಿಸುತ್ತಾರೆ. ಬಾಲಕಿಯ ತಾಯಿ ಶಾಲೆಯ ಮುಖ್ಯಸ್ಥರನ್ನು ಜೈಲಿಗೆ ಅಟ್ಟುವಷ್ಟು ಬೀದರ್‍ನ ಪೊಲೀಸ್ ಅಧಿಕಾರಿ ಉದ್ಧಟತನ ತೋರಿದ್ದಾರೆ ಎಂದು ಆರೋಪಿಸಿದರು.

   ಪ್ರಜಾಪ್ರಭುತ್ವ, ಸಂವಿಧಾನವನ್ನು ವಿರೋಧಿಸುವವರೇ ನಿಜವಾದ ದೇಶದ್ರೋಹಿಗಳು. ದೇಶದ್ರೋಹವಲ್ಲದ ಕೆಲಸ ಮಾಡಿಲ್ಲದವರನ್ನು ಜೈಲಿಗೆ ಅಟ್ಟುವುದು ನಾಚೀಕೆಗೆಡಿನ ಕೆಲಸ ಎಂದು ಆರೋಪಿಸಿದರು.ನನ್ನ ಅಪ್ಪ, ಅಮ್ಮ ಎಲ್ಲಿ ಹುಟ್ಟಿದ್ದಾರೋ ಅದು ನನಗೆ ಗೊತ್ತಿಲ್ಲ. ನಾನು ದಾಖಲೆಗಳನ್ನು ನೀಡದಿದ್ದರೆ, ನುಸುಳಕೋರನಾಗುತ್ತೇನೆಯೇ ಎಂದು ಪ್ರಶ್ನಿಸಿದರು.

  ಪ್ರಭಾಕರ ಕಲ್ಲಡಕ ಅವರ ಶಾಲೆಯಲ್ಲಿ ಸುಪ್ರೀಂಕೋರ್ಟ್‍ನ ನಿರ್ದೇಶನವನ್ನು ಉಲ್ಲಂಘಿಸಿ ಬಾಬರಿ ಮಸೀದಿಯನ್ನು ಧ್ವಂಸಮಾಡಿದ ನಾಟಕವನ್ನು ಪ್ರದರ್ಶಿಸಲಾಯಿತು. ಅನಂತಕುಮಾರ್ ಹೆಗ್ಡೆ, ತೇಜಸ್ವಿ ಸೂರ್ಯ, ಪ್ರತಾಪ ಸಿಂಹ, ನಳಿನ ಕುಮಾರ್ ಕಟೀಲ್ ಅವರು ಮನಬಂದಂತೆ ಮಾತನಾಡುತ್ತಾರೆ. ಅವರ ಮೇಲೆ ಯಾವುದೇ ಕ್ರಮ ಕೈಗೊಳ್ಳದ ಪೆÇಲೀಸ್ ಇಲಾಖೆ ಯು.ಟಿ. ಖಾದರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಿದ್ದಾರೆ ಎಂದು ಆಪಾದಿಸಿದರು.

  ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಮಾತನಾಡಿ, ಪೆÇಲೀಸ್ ಇಲಾಖೆಯ ದುರ್ಬಳಕೆ ವಿಚಾರ ಸೇರಿದಂತೆ ಹಲವಾರು ವಿಷಯಗಳನ್ನು ನಾಳೆಯಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಎಚ್ಚರಿಕೆ ನೀಡಿದರು.ಈ ಸಂದರ್ಭದಲ್ಲಿ ಸಂಸದ ಡಿ.ಕೆ. ಸುರೇಶ್, ಕಾಂಗ್ರೆಸ್ ಮುಖಂಡರಾದ ಡಿ.ಕೆ. ಹರಿಪ್ರಸಾದ್, ವಿ.ಎಸ್. ಉಗ್ರಪ್ಪ, ರಾಮಲಿಂಗಾರೆಡ್ಡಿ, ಸೌಮ್ಯರೆಡ್ಡಿ, ಎಚ್.ಎಂ. ರೇವಣ್ಣ, ನಾರಾಯಣಸ್ವಾಮಿ, ಸೇರಿದಂತೆ ಹಲವರು ನಾಯಕರು ಉಪಸ್ಥಿತರಿದ್ದರು.

  ಪೊಲೀಸರು ಇರುವುದು ಕಾನೂನು ಪಾಲನೆ, ಶಾಂತಿ ಸಾಮರಸ್ಯ ಕಾಪಾಡಲು, ಅದನ್ನು ಬಿಟ್ಟು ಬಿಜೆಪಿ ಸರ್ಕಾರ ಆರ್‍ಎಸ್‍ಎಸ್ ಸಂಘಟನೆಗಳ ಮುಖ್ಯಸ್ಥನ ಮಾತುಗಳನ್ನು ಕೇಳುವುದಕ್ಕಲ್ಲ. ಅನಗತ್ಯವಾಗಿ ಸುಳ್ಳು ಮೊಕದ್ದಮೆಗಳನ್ನು ಹಾಕುವುದನ್ನು ನಿಲ್ಲಿಸಬೇಕು.  ಕಾನೂನು ದುರುಪಯೋಗ ಪಡಿಸಿಕೊಳ್ಳುವ ಪ್ರಯತ್ನಗಳು ಹೀಗೆಯೇ ಮುಂದುವರಿಸಿದರೆ, ಮುಂದಿನ ದಿನಗಳಲ್ಲಿ ಕೆಟ್ಟ ಪರಿಣಾಮವನ್ನು ಪೊಲೀಸರು ಎದುರಿಸಬೇಕಾಗುತ್ತದೆ

ಸಿದ್ದರಾಮಯ್ಯ
ವಿರೋಧ ಪಕ್ಷದ ನಾಯಕ 

  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ