ಬೆಂಗಳೂರು:
ಚುನಾಯಿತ ಸರ್ಕಾರವೊಂದು ಜನರ ಮೇಲೆ ಇಷ್ಟು ಅಮಾನವೀಯ, ಕ್ರೂರಿ ಕೋಮುವಾದಿ ಆಗಬಾರದು. ಮಂಗಳೂರು ಗಲಭೆಯಲ್ಲಿ ಸತ್ತವರಿಗೆ ಪರಿಹಾರ ಇಲ್ಲ ಎಂದು ಹೇಳಿರುವ ಬಿ.ಎಸ್.ಯಡಿಯೂರಪ್ಪ ನಿರೀಕ್ಷೆಯಂತೆ ತನಿಖೆಯ ಮೊದಲೇ ತೀರ್ಪು ನೀಡಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದ್ದಾರೆ.
ಮಂಗಳೂರು ಗಲಭೆಯಲ್ಲಿ ಸತ್ತವರಿಗೆ ಪರಿಹಾರ ಇಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರೀಕ್ಷೆಯಂತೆ ತನಿಖೆಯ ಮೊದಲೇ ತೀರ್ಪು ನೀಡಿದ್ದಾರೆ. ಮಂಗಳೂರು ಗಲಭೆಗೆ ಗುಂಡೇಟಿನಿಂದ ಸತ್ತವರೇ ಕಾರಣ ಎಂದು ತೀರ್ಪು ನೀಡಿರುವ ಮುಖ್ಯಮಂತ್ರಿಗಳೇ, ಸಿಐಡಿ ತನಿಖೆಯ ನಾಟಕ ಯಾಕೆ? ಅದನ್ನು ನಿಲ್ಲಿಸಿಬಿಡಿ. ಈಗ ಖಾತ್ರಿಯಾಗಿದೆ, ಹೆಣ ಬೀಳಿಸಲು ಪೊಲೀಸರಿಗೆ ಆದೇಶ ನೀಡಿದವರು ನೀವೇ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಗೋಲಿಬಾರ್‌ನಲ್ಲಿ ಹಸುನೀಗಿದವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎರಡು ದಿನಗಳ ಹಿಂದೆ 10 ಲಕ್ಷ ರೂ.ಪರಿಹಾರ ಘೋಷಿಸಿದ್ದರು. ಆದರೆ ಸಂತ್ರಸ್ತ ಕುಟುಂಬಕ್ಕೆ ಇನ್ನೂ ಪರಿಹಾರ ಘೊಷಿಸಿಲ್ಲ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








