ಬೆಂಗಳೂರು
ರಾಜ್ಯದಿಂದ ಹೊರಗೆ ವಾಸಿಸುತ್ತಿರುವ ಕನ್ನಡಿಗರಿಗಾಗಿ ಸಹಾಯವಾಣಿ ಸೇವೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದರು.ಮುಂಬೈ ಹಾಗೂ ಇತರೆ ರಾಜ್ಯ ಮತ್ತು ವಿದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ಸಹಾಯಕ್ಕಾಗಿ ಸಹಾಯ ವಾಣಿಯೊಂದನ್ನು ಆರಂಭಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಬರೆದ ಪತ್ರದ ಹಿನ್ನೆಲೆಯಲ್ಲಿ ಸಹಾಯವಾಣಿಗೆ ಚಾಲನೆ ನೀಡಲಾಯಿತು.
ಈ ಸಹಾಯವಾಣಿ ಹೊರನಾಡಿನಲ್ಲಿ ಸಿಲುಕಿರುವ ಕನ್ನಡಿಗರ ಸಮಸ್ಯೆಗಳಿಗೆ ಸ್ಪಂದಿಸಲಿದೆ. ಸಹಾಯವಾಣಿಗೆ ಬರುವ ಮನವಿಗಳನ್ನು ಆಧರಿಸಿ ಆಯಾ ಸ್ಥಳೀಯ ಆಡಳಿತಕ್ಕೆ ಅಗತ್ಯ ನೆರವು ನೀಡುವಂತೆ ಮನವಿ ಮಾಡಲಾಗುವುದು.ಈ ಸಹಾಯವಾಣಿಯು ಬೆಂಗಳೂರಿನಲ್ಲಿ ಕೇಂದ್ರಿತವಾಗಿದ್ದು, 50 ಮಂದಿ ಮೂರು ಪಾಳಿಗಳಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ಸಹಾಯವಾಣಿ ಸಂಖ್ಯೆ 080-22636800.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ