ಸರ್ಕಾರದಂದ ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ…!

ಬೆಂಗಳೂರು:

     ಕರ್ನಾಟಕ ಸರ್ಕಾರ ಸೋಮವಾರ ಪ್ರಮುಖ ಹುದ್ದೆಗಳಲ್ಲಿದ್ದ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.ಬಿಬಿಎಂಪಿ ವಿಶೇಷ ಆಯುಕ್ತರಾಗಿದ್ದ ಪಿ ರಾಜೇಂದ್ರ ಚೋಳನ್ ಅವರನ್ನು ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಎಂಡಿ ಯನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ. 

    ಜೆ. ಮಂಜುನಾಥ್-ಬಿಬಿಎಂಪಿ ವಿಶೇಷ ಆಯುಕ್ತ, ಹೆಪ್ಸಿಬಾ ರಾಣಿ ಕೊರ್ಲಪಾಟಿ-ಬಿಬಿಎಂಪಿ ವಿಶೇಷ ಆಯುಕ್ತರು(ಎಸ್ಟೇಟ್) ಹಾಗೂ ಪಿ. ಶಿವಶಂಕರ್ ಅವರನ್ನು ಚಿಕ್ಕಬಳ್ಳಾಪುರ ಜಿ.ಪಂ. ಸಿಇಒ ಆಗಿ ಸರ್ಕಾರ ವರ್ಗಾವಣೆ ಮಾಡಿದೆ.ಕರ್ನಾಟಕ ರೇಷ್ಮೆ ಮಾರುಕಟ್ಟೆ ಬೋರ್ಡ್ ಲಿಮೆಟೆಡ್ ನಿರ್ದೇಶಕರಾಗಿದ್ದ  ಎಂ.ಆರ್ ರವಿ ಕುಮಾರ್  ಅವರನ್ನು ಕೋಲಾರ ಜಿಲ್ಲಾ ಪಂಚಾಯಿತಿ ಸಿಇಒ ಯನ್ನಾಗಿ ನೇಮಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ