ಬೆಂಗಳೂರು:
ಐದು ವರ್ಷಗಳ ಕಾಲ ಸಮ್ಮಿಶ್ರ ಸರ್ಕಾರ ಸುಭದ್ರವಾಗಿ ಆಡಳಿತ ನಡೆಸಲಿದೆ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ
ಮೈಸೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಮ್ಮಿಶ್ರ ಸರ್ಕಾರವನ್ನು ಯಾರೂ ಸಹ ಅಸ್ಥಿರಗೊಳಿಸಲು ಸಾಧ್ಯವಿಲ್ಲ ಈಗಾಗಲೇ ಬಿಜೆಪಿ ಪಕ್ಷದವರು ಹಲವಾರು ಬಾರಿ ಗಡುವು ನೀಡಿದ್ದರು. ಈ ಬಾರಿಯೂ ಸಹ ಗಡುವು ನೀಡಿದ್ದಾರೆ. ಆದರೆ ಸರ್ಕಾರ ಐದು ವರ್ಷಗಳ ಪೂರೈಸಿ ಉತ್ತಮ ಆಡಳಿತ ನೀಡಲಿದೆ ಎಂದರು.
ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಐದು ಕ್ಷೇತ್ರಗಳಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಮಂಡ್ಯ ರಾಮನಗರ. ಶಿವಮೊಗ್ಗದಲ್ಲಿ ಜೆಡಿಎಸ್ ಗೆಲುವು ಸಾಧಿಸಲಿದೆ ಬಳ್ಳಾರಿ ಹಾಗೂ ಜಮಖಂಡಿಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ನಾನು ಐದು ಕ್ಷೇತ್ರದಲ್ಲಿಯೂ ಚುನಾವಣಾ ಪ್ರಚಾರಕ್ಕೆ ಹೋಗುತ್ತೇನೆ ಎಂದರು.
ಮತದಾರರು ಯಾರು ಸಹ ಬಿಜೆಪಿಯ ನಾಯಕರ ಅಧೀನದಲ್ಲಿ ಇಲ್ಲ. ಸಂಸದೆ ಶೋಭಾ ಕರಂದ್ಲಾಜೆ ಸಹ ಬೆಂಗಳೂರಿನ ವಿಧಾನಸಭೆಯಲ್ಲಿ ಕ್ಷೇತ್ರದಲ್ಲಿ ಸೋಲನ್ನಪ್ಪಿದ್ದಾರೆ. ನನ್ನ ಬಗ್ಗೆ ಮಾತನಾಡುವ ನೈತಿಕತೆ ಅವರಿಗಿಲ್ಲ ಜೆಡಿಎಸ್ ಕಾಂಗ್ರೆಸ್ ಹೊಂದಾಣಿಕೆ ಮುಂದಿನ ಲೋಕಸಭೆಗೆ ಮುಂದುವರಿಯಲಿದೆ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ