ಬ್ಯಾಡಗಿ:
ಪರಿಶಿಷ್ಟ ಜಾತಿ ಮತ್ತು ಪಂಗಡದ ಜನತೆಯ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಹಾಗೂ ಕೇಂದ್ರ ಸರಕಾರಗಳು ಕೋಟ್ಯಾಂತರ ರೂ.ಗಳ ಅನುದಾನವನ್ನು ಬಿಡುಗಡೆ ಮಾಡುತ್ತಿದ್ದು ಅದರ ಸದುಪಯೋಗ ಪಡಿಸಿಕೊಳ್ಳುವಂತೆ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.
ಶನಿವಾರ ಅವರು ಸ್ಥಳೀಯ ಪುರಸಭೆ ವ್ಯಾಪ್ತಿಯಲಿ ಬರುವ ಬೆಟ್ಟದ ಮಲ್ಲೇಶ್ವರ ನಗರದ ಆಶ್ರಯ ಬಡಾವಣೆಯಲ್ಲಿ ಕರ್ನಾಟಕ ರಾಜ್ಯ ನೀರಾವರಿ ಅಭಿವೃದ್ಧಿ ನಿಗಮದ ಅನುದಾನದಡಿಯಲ್ಲಿ ನಿರ್ಮಿತಿ ಕೇಂದ್ರದ ವತಿಯಿಂದ 12 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗಿರುವ ಡಾ.ಅಂಬೇಡ್ಕರ್ ಭವನವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯ ಸರಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಮುದಾಯ ಭವನಗಳನ್ನು ನಿರ್ಮಿಸಲು ಮುಂದಾಗಿದ್ದು, ಅದರ ಸದುಪಯೋಗವನ್ನು ಪಡೆದುಕೊಳ್ಳಲು ಮುಂದಾಬೇಕೆಂದರು.
ತಾಲೂಕಾ ಬಿಜೆಪಿ ಅಧ್ಯಕ್ಷ ಸುರೇಶ ಅಸಾದಿ ಮಾತನಾಡಿ ಡಾ.ಅಂಬೇಡ್ಕರ್ ಆಶಯದಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಅಭಿವೃದ್ಧಿಗಾಗಿ ವಿವಿಧ ಜನಪರ ಯೋಜನೆಗಳನ್ನು ಜಾರಿ ಮಾಡುತ್ತಲಿದ್ದು, ಅವುಗಳ ಉಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳುವಂತಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯೆ ಸುಮಂಗಲಾ ಪಟ್ಟಣಶೆಟ್ಟಿ, ಪುರಸಭಾ ಸದಸ್ಯರುಗಳಾದ ಬಸವಣ್ಣೆಪ್ಪ ಛತ್ರದ, ಚಂದ್ರಪ್ಪ ಶೆಟ್ಟರ, ಫಕ್ಕೀರಮ್ಮ ಚಲವಾದಿ, ಗಾಯತ್ರಿ ರಾಯಕರ, ಸುಭಾಸ ಮಾಳಗಿ, ಹನುಮಂತಪ್ಪ ಮ್ಯಾಗೇರಿ, ಶಿವರಾಜ ಅಂಗಡಿ ಸರೋಜಾ ಉಳ್ಳಾಗಡ್ಡಿ, ರವೀಂದ್ರ ಪಟ್ಟಣಶೆಟ್ಟಿ, ನಿರ್ಮಿತಿ ಕೇಂದ್ರದ ಇಂಜನೀಯರ ಎಚ್.ಡಿ.ಶಾಂತಕುಮಾರ ಸೇರಿದಂತೆ ಇನ್ನೀತರರಿದ್ದರು.