ಬೆಂಗಳೂರು
ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮದಲ್ಲಿ ಪಟಾಕಿ ಸಿಡಿತವು ನಗರದಲ್ಲಿ ಕಡಿಮೆಯಾಗುತ್ತಿದ್ದು ಕಳೆದ ವರ್ಷಕ್ಕೆ ಹೋಲಿಸಿದೆರೆ ಪಟಾಕಿಗಳಿಂದ ಕಣ್ಣಿಗೆ ಗಾಯಗೊಂಡವರ ಸಂಖ್ಯೆಯಲ್ಲಿ ಸಾಕಷ್ಟು ಇಳಿಕೆಯಾಗಿದೆ .
ಕಳೆದ ಬಾರಿ ಒಂದು ದಿನಕ್ಕೆ 34 ಪ್ರಕರಣಗಳು ದಾಖಲಾಗಿದ್ದವು. ಆದರೆ ಈ ಬಾರಿ ದೀಪಾವಳಿ ಆಚರಣೆಯ ಮೂರು ದಿನಗಳ ಕಾಲ ಕೇವಲ 32 ಪ್ರಕರಣಗಳು ದಾಖಲಾಗಿದ್ದು, ಪಟಾಕಿ ಸಿಡಿತದ ಪ್ರಮಾಣ ಕಡಿಮೆಯಾಗಿರುವುದನ್ನು ತೋರಿಸುತ್ತದೆ ಎಂದು ಆಸ್ಪತ್ರೆಯ ನಿರ್ದೇಶಕಿ ಡಾ. ಸುಜಾತ ರಾಥೋಡ್ ತಿಳಿಸಿದ್ದಾರೆ.
ಫ್ಲವರ್ ಪಾಟ್, ಲಕ್ಷ್ಮಿ ಪಟಾಕಿಯಿಂದ ಹೆಚ್ಚಿನ ಹಾನಿಯಾಗಿರುವುದು ಚಿಕಿತ್ಸೆ ವೇಳೆ ಕಂಡುಬಂದಿದೆ. ಮಹಿಳೆಯರಿಗಿಂತ ಪುರುಷರಿಗೆ ಹೆಚ್ಚಿನ ಹಾನಿಯಾಗಿದ್ದು, ಮೂವರ ಕಣ್ಣುಗಳಿಗೆ ಗಂಭೀರ ಪ್ರಮಾಣದಲ್ಲಿ ಹಾನಿಯಾಗಿದ್ದು ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಹಿಂದುಳಿದ ವರ್ಗಗಳ ಆಯೋಗಗಳ ಮಾಜಿ ಅಧ್ಯಕ್ಷ ಸಿ.ಎಸ್.ದ್ವಾರಕಾನಾಥ್ ಅವರ ಮೊಮ್ಮಗಳು ಮನ್ಯು ಕಾರ್ತಿಕ್ ಪಟಾಕಿ ಸಿಡಿತದಿಂದ ಕಣ್ಣಿಗೆ ಹಾನಿ ಮಾಡಿಕೊಂಡು ಬಂದಿದ್ದು, ಆಕೆಗೆ ಚಿಕಿತ್ಸೆ ನೀಡಲಾಗಿದ್ದು, ಕಣ್ಣಿಗೆ ಯಾವುದೇ ಹಾನಿಯಾಗಿಲ್ಲ. ಆರ್.ಟಿ. ನಗರದ ಸಿಬಿಐ ರಸ್ತೆಯಲ್ಲಿ ಮನ್ಯು ರಾತ್ರಿ ಪಟಾಕಿ ಸಿಡಿಸುವಾಗ ಕಣ್ಣಿಗೆ ಹಾನಿ ಮಾಡಿಕೊಂಡು ಚಿಕಿತ್ಸೆಗಾಗಿ ದಾಖಲಾಗಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
