ಹುಳಿಯಾರು:
ಹುಳಿಯಾರು ಹೋಬಳಿಯ ಹೊಯ್ಸಳಕಟ್ಟೆ ಗ್ರಾಮದಲ್ಲಿ ರಾಜೀವ್ ಗಾಂಧಿ ಪಂಚಾಯಿತಿ ಸಶಕ್ತಿಕರಣ ಅಭಿಯಾನ ಯೋಜನೆಯಡಿ ನಿರ್ಮಿಸಿರುವ ಗ್ರಾಮ ಪಂಚಾಯ್ತಿಯ ನೂತನ ಕಟ್ಟಡ ಹಾಗು ಪಶು ಚಿಕಿತ್ಸಾಲಯ ಕಟ್ಟಡಗಳ ಉದ್ಘಾಟನೆಯನ್ನು ಜೂನ್ 24 ಸೋಮವಾರ ಬೆಳಿಗ್ಗೆ 10 ಗಂಟೆಗೆ ಏರ್ಪಡಿಸಲಾಗಿದೆ.
ಶಾಸಕರಾದ ಜೆ.ಸಿ.ಮಾಧುಸ್ವಾಮಿ ಉದ್ಘಾಟಿಸಲಿರುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಪಂ ಅಧ್ಯಕ್ಷೆ ನಾಗರತ್ನ ಮಂಜುನಾಥ್ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್, ಪಶುಸಂಗೋಪನಾ ಸಚಿವ ವೆಂಕಟರಾವ್ ನಾಡಗೌಡ, ಸಂಸತ್ ಸದಸ್ಯ ಜಿ.ಎಸ್.ಬಸವರಾಜು, ಜಿಪಂ ಅಧ್ಯಕ್ಷೆ ಲತಾ ರವಿಕುಮಾರ್, ವಿಧಾನ ಪರಿಷತ್ ಸದಸ್ಯರುಗಳಾದ ಬೆಮೆಲ್ ಕಾಂತರಾಜು, ಚೌಡರೆಡ್ಡಿ ತೂಪಲ್ಲಿ, ನಾರಾಯಣಸ್ವಾಮಿ ಮತ್ತಿತರರು ಆಗಮಿಸುವರು.