ಬೆಂಗಳೂರು
ಬೆಂಗಳೂರಿನ ಮಾಣಿಕ್ ಷಾ ಪೆರೆಡ್ ಮೈದಾನದಲ್ಲಿ ಸರ್ಕಾರದಿಂದ ಸೇರಿದಂತೆ ರಾಜ್ಯದ ಶಿವಮೊಗ್ಗ,ಚಿಕ್ಕೋಡಿ ,ತುಮಕೂರು,ಗದಗ ಸೇರಿದಂತೆ ವಿವಿದೆಡೆ 71ನೇ ಗಣರಾಜ್ಯೋತ್ಸವ ಆಚರಿಸಲಾಯಿತು.
ಶಿವಮೊಗ್ಗದಲ್ಲಿ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ, ಯುವ ಸಬಲೀಕರಣ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ನಗರದ ಡಿ.ಎ.ಆರ್. ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವ ದಿನಾಚರಣೆಯ ಸಂದೇಶ ಸಾರಿದರು. ಒಕ್ಕೂಟ ವ್ಯವಸ್ಥೆಯಲ್ಲಿ ಬಾಳುತ್ತಿರುವ ನಾವು ರಾಷ್ಟ್ರದ ಸಾರ್ವಭೌಮತೆಯನ್ನು ಗೌರವಿಸಿ, ಅದನ್ನು ಎತ್ತಿಹಿಡಿಯುತ್ತೇವೆ.
ಸಂವಿಧಾನ ರೂಪಿಸಿಕೊಟ್ಟ ಒಕ್ಕೂಟ ವ್ಯವಸ್ಥೆಯನ್ನು, ಒಪ್ಪಿಕೊಂಡು, ಭಾರತದ ಸಾರ್ವಭೌಮತೆಗೆ ಧಕ್ಕೆ ತಾರದಂತೆ, ತನ್ನ ಅಸ್ಮಿತೆಯನ್ನೂ ಉಳಿಸಿಕೊಂಡು ಅಭಿವೃದ್ಧಿಯೆಡೆಗೆ ಸಾಗುತ್ತಿರುವ ರಾಜ್ಯ ನಮ್ಮ ಕರ್ನಾಟಕ. ಸಂವಿಧಾನದ ಆಶಯದ ಭದ್ರ ಬುನಾದಿಯ ಮೇಲೆ ನಾಡ ಕಟ್ಟುವ ಕೆಲಸ ನಮ್ಮ ಸರ್ಕಾರ ಮುಂದುವರೆಸಿದೆ.ಇಂದು ಕರ್ನಾಟಕದ ಸಾಧನೆ ಅನೇಕ ರಾಜ್ಯಗಳಿಗೆ ಮಾದರಿಯಾಗಿದೆ. ಜ್ಞಾನಾಧಾರಿತ ಮಾನವ ಸಂಪನ್ಮೂಲ, ಪ್ರಾಕೃತಿಕ ಸಂಪತ್ತು, ವೈಶಿಷ್ಟ್ಯಪೂರ್ಣ ಸಾಮಾಜಿಕ ಚಿಂತನೆ, ಪ್ರಯೋಗಶೀಲ ಆಡಳಿತ, ಕರ್ನಾಟಕದ ಹೆಗ್ಗುರುತಾಗಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ನಮ್ಮ ಸರ್ಕಾರ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದಲ್ಲಿ ನಂಬಿಕೆಯಿರಿಸಿದ್ದು, ಗ್ರಾಮೀಣಾಭಿವೃದ್ಧಿ, ಶಿಕ್ಷಣ, ಆರೋಗ್ಯ, ಕೃಷಿ, ನೀರಾವರಿ ಕ್ಷೇತ್ರಗಳ ಅಭಿವೃದ್ಧಿಗೆ ವಿಶೇಷ ಗಮನ ಹರಿಸಿದೆ. ಸಮಾಜದ ಕೊನೆಯ ವ್ಯಕ್ತಿಯೂ ಬದುಕಿನಲ್ಲಿ ಭದ್ರತೆಯ ಭಾವ ಕಾಣಬೇಕು ಎಂಬ ಆಶಯದಿಂದ ನಮ್ಮ ಸರ್ಕಾರ ದೂರದೃಷ್ಟಿಯ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿದೆ ಎಂದು ವಿವರಿಸಿದರು.
ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾಗಿರುವ 791 ಪ್ರಾಥಮಿಕ ಶಾಲೆಗಳು ಹಾಗೂ 37ಪ್ರೌಢಶಾಲೆಗಳ ಒಟ್ಟು 1707 ಕೊಠಡಿಗಳ ದುರಸ್ತಿಗಾಗಿ 35 ಕೋಟಿ ರೂ. ನಿಗದಿಪಡಿಸಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ. ಕೈಗಾರಿಕೆ, ಪ್ರವಾಸೋದ್ಯಮ ಅಭಿವೃದ್ಧಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಸಂಪರ್ಕ ರಸ್ತೆಗಳು, ನೂತನ ರೈಲು ಮಾರ್ಗ ಸಂಪರ್ಕಗಳಿಗೆ ಒತ್ತು ನೀಡಲಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣ ಯೋಜನೆಗೆ ಈಗಾಗಲೇ ಚಾಲನೆ ದೊರೆತಿದೆ.ಜೋಗ ಜಲಪಾತ, ಕವಲೆದುರ್ಗ, ಶಿವಪ್ಪ ನಾಯಕ ಅರಮನೆ, ನಗರ ಕೋಟೆ ಸೇರಿದಂತೆ ಪ್ರಮುಖ ಪ್ರವಾಸಿ ತಾಣಗಳ ಅಭಿವೃದ್ಧಿಗೆ 20ಕೋಟಿ ರೂ. ಅನುದಾನ ಒದಗಿಸಲಾಗಿದೆ ಎಂದರು.
ಮುದ್ರಣ ಕಾಶಿ ಗದಗ ಜಿಲ್ಲೆಯಲ್ಲಿ 71 ನೇ ಗಣರಾಜ್ಯೋತ್ಸವದ ಸಂಭ್ರಮ ಮನೆಮಾಡಿತು. ಗಣರಾಜ್ಯೋತ್ಸವದ ಅಂಗವಾಗಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ ಸಿ ಪಾಟೀಲ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ನಂತರ ಗಣರಾಜ್ಯೋತ್ಸವದ ಪಥ ಸಂಚಲನ ವೀಕ್ಷಣೆ ಮಾಡಿ, ಧ್ವಜವಂದನೆ ಸ್ವೀಕರಿಸಿದರು.ಪೆÇಲೀಸ್ ಇಲಾಖೆ, ಶಾಲಾ ಮಕ್ಕಳು, ಗೃಹ ರಕ್ಷಕ ಪಡೆ, ಅರಣ್ಯ ರಕ್ಷಕ ಪಡೆ, ಸೇವಾದಳ, ಸ್ಕೌಟ್ಸ್ ತಂಡಗಳಿಂದ ಪಥ ಸಂಚಲನ ನಡೆಯಿತು. ಕಾರ್ಯಕ್ರಮದಲ್ಲಿ ಗದಗ ಶಾಸಕ ಹೆಚ್ ಕೆ ಪಾಟೀಲ್, ಎಂಎಲ್ಸಿ ಎಸ್.ವಿ ಸಂಕನೂರು, ಜಿಲ್ಲಾಧಿಕಾರಿ ಎಮ್.ಜಿ. ಹಿರೇಮಠ, ಎಸ್ಪಿ ಶ್ರೀನಾಥ್ ಜೋಶಿ, ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಭಾಗಿಯಾಗಿದ್ದರು.
ಇತ್ತ ತಮಕೂರು ಜಿಲ್ಲಾಡಳಿತದಿಂದ ಸಂಭ್ರಮದ ಗಣರಾಜ್ಯೋತ್ಸವ ಆಚರಿಸಿ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿನಗರದ ಸರ್ಕಾರಿ ಪದವಿ ಕಾಲೇಜು ಮೈದಾನದಲ್ಲಿ ಧ್ವಜಾರೋಹಣೆ ನೆರವೇರಿಸಿದರು.ತುಮಕೂರು ನಗರ ಶಾಸಕ ಜಿ.ಬಿ ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್, ಸಿಇಓ ಶುಭಾಕಲ್ಯಾಣ್, ಪಾಲಿಕೆ ಆಯುಕ್ತ ಬೂಬಾಲನ್, ಎಸ್ಪಿ ಡಾ.ಕೆ ವಂಶಿಕೃಷ್ಣ ಭಾಗಿಯಾಗಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ