ಹಿರೇಕೆರೂರು
ಕೋರೋನಾ ವೈರಸ್ ನಿಂದ ಇಡೀ ದೇಶ ಲಾಕ್ ಡೌನ್ ಆಗಿದ್ದರು ಪೌರಕಾರ್ಮಿಕರು ತಮ್ಮ ಜೀವದ ಹಂಗು ತೊರೆದು ತಮ್ಮ ಕಾಯಕದಲ್ಲಿ ತೊಡಗಿಕೊಂಡಿದ್ದಾರೆ ಇವರಿಗೆ ನಮ್ಮ ಕೈಲಾದಷ್ಟು ಸಹಾಯ ಮಾಡಬೇಕು ಎಂದು ಕರ್ನಾಟಕ ಕ್ಷತ್ರಿಯ ಒಕ್ಕೂಟದ ತಾಲೂಕ ಅಧ್ಯಕ್ಷರಾದ ಹರೀಶ್ ಕಲಾಲ ಹೇಳಿದರು.
ಪಟ್ಟಣದ ಪೌರಕಾರ್ಮಿಕರಿಗೆ ಕರ್ನಾಟಕ ಕ್ಷತ್ರಿಯ ಒಕ್ಕೂಟ ಹಿರೇಕೆರೂರು ವತಿಯಿಂದ ಅವಶ್ಯಕ ಆಹಾರ ಸಾಮಗ್ರಿಗಳನ್ನು ವಿತರಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಹನುಮಂತ ಡಾಂಗೆ, ಉದಯ ಕೊಲ್ಲಾಪುರ, ಮಣಿಕಂಠ ಕುಂದಾಪುರ, ಎಬಿವಿಪಿ ವಿಭಾಗ ಸಂಘಟನಾ ಕಾರ್ಯದರ್ಶಿ ವೆಂಕಟೇಶ್ ಡಾಂಗೆ, ವಿಜಯ ಕೋಲಾಪುರ ಇತರರು ಇದ್ದರು.








