ತುರುವೇಕೆರೆ
ತುಮಕೂರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜುರವರಿಗೆ ತಾಲ್ಲೂಕಿನಿಂದ ಸುಮಾರು 75 ಸಾವಿರಕ್ಕೂ ಅಧಿಕ ಮತಗಳು ಬೀಳಲಿವೆ ಎಂದು ಶಾಸಕ ಮಸಾಲಜಯರಾಮ್ ವಿಶ್ವಾಸ ವ್ಯಕ್ತಪಡಿಸಿದರು.
ತುಮಕೂರು ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಪರವಾಗಿ ತಾಲ್ಲೂಕಿನ ಲೋಕಮ್ಮನಹಳ್ಳಿ ಗ್ರಾಮದಲ್ಲಿ ಶುಕ್ರವಾರ ತಾಲ್ಲೂಕು ಬಿಜೆಪಿ ಹಮ್ಮಿಕೊಂಡಿದ್ದ ಪ್ರಚಾರ ಹಾಗೂ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ತಾಲ್ಲೂಕಿನ ಒಕ್ಕಲಿಗರು ಜೆಡಿಎಸ್ ಪಕ್ಷಕ್ಕೆ ಯಾರೂ ಸಹ ಗುತ್ತಿಗೆ ನೀಡಿಲ್ಲ. ಒಕ್ಕಲಿಗರಾದ ನನ್ನನ್ನು 62 ಸಾವಿರ ಮತಗಳನ್ನು ನೀಡಿ ಬಿಜೆಪಿ ಪಕ್ಷದಿಂದ ಗೆಲ್ಲಿಸಿದ್ದಾರೆ. ಅದೇ ರೀತಿ ಲೋಕಸಭಾ ಚುನಾವಣೆಯಲ್ಲಿ ಇನ್ನು 25 ಸಾವಿರ ಹೆಚ್ಚಿನ ಮತಗಳನ್ನು ನೀಡುವ ಮೂಲಕ ಜಿಎಸ್‍ಬಿ ಗೆಲುವಿಗೆ ಪಣ ತೊಡಬೇಕು ಎಂದು ಮನವಿ ಮಾಡಿದರು.
ಹೆಚ್.ಡಿ.ದೇವೇಗೌಡರು ಕುಟುಂಬ ರಾಜಕಾರಣ ಮಾಡುವ ಮೂಲಕ ಒಕ್ಕಲಿಗರ ಮುಖಂಡರಿಗೆ ಅನ್ಯಾಯ ಮಾಡಿದ್ದಾರೆ. ಜಿಲ್ಲೆಗೆ ನೀರು ಹರಿಸದಂತೆ ದೇವೇಗೌಡರ ರೇವಣ್ಣ, ಅವರ ಪತ್ನಿ ಹೋರಾಟ ಮಾಡಿದ್ದಾರೆ. ಇಂತವರು ತುಮಕೂರು ಜಿಲ್ಲೆಯಿಂದ ಸ್ಪರ್ಧಿಸಲು ಯಾವ ನೈತಿಕತೆ ಇಲ್ಲ ಎಂದು ತಿಳಿಸಿದರು.
ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಮಾತನಾಡಿ, ತುಮಕೂರು ಜಿಲ್ಲೆಯನ್ನು ಪರರ ಜಿಲ್ಲೆಗೆ ನೀಡಿದರೆ ನಿಮ್ಮ ಮಕ್ಕಳಿಗೆ ವಿಷ ಹಾಕಿದಂತೆ. ಈಗಾಗಲೇ ಚನ್ನರಾಯಪಟ್ಟಣ, ಹಾಸನ ಜಿಲ್ಲೆಯವರು ಗುತ್ತಿಗೆದಾರರ ಹಾವಳಿ ಹೆಚ್ಚಾಗಿದೆ. ಇನ್ನು ಮುಂದೆ ಎಲ್ಲ ಚುನಾವಣೆಗಳಿಗೂ ಆಗಮಿಸಲಿದ್ದಾರೆ ಜಿಲ್ಲೆಯ ಜನ ಎಚ್ಚರವಹಿಸಿ ಎಂದು ತಿಳಿಸಿದರು.ವಿಧಾನ ಪರಿಷತ್ ಮಾಜಿ ಸದಸ್ಯ ಹುಲಿನಾಯ್ಕರ್, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಹುಚ್ಚಯ್ಯ, ಬಿಜೆಪಿ ಅಧ್ಯಕ್ಷ ದುಂಡಾರೇಣಕಪ್ಪ ಸೇರಿದಂತೆ ಮುಖಂಡರು ಕಾರ್ಯಕರ್ತರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
