ದಾವಣಗೆರೆ:
ನಗರದ ಎಪಿಎಂಸಿ ಮಾರುಕಟ್ಟೆ ಪ್ರಾಂಗಣದ ಸಿ-ಬ್ಲಾಕ್‍ನಲ್ಲಿ ಇಂದು (ಜ.1ರಂದು) ಬೆಳಿಗ್ಗೆ 11 ಗಂಟೆಗೆ ನೂತನ ಹಣ್ಣಿನ ಮಾರುಕಟ್ಟೆಯ ಅಡಿಗಲ್ಲು ಮತ್ತು ಗುದ್ದಲಿ ಪೂಜೆ ಕಾರ್ಯಕ್ರಮ ನಡೆಯಲಿದೆ ಎಂದು ಹಣ್ಣಿನ ಸಗಟು ವರ್ತಕರ ಮತ್ತು ದಲ್ಲಾಲರ ಸಂಘದ ಅಧ್ಯಕ್ಷ ಹೆಚ್.ಕೆ.ಅಬ್ದುಲ್ ರೆಹಮಾನ್ ತಿಳಿಸಿದರು.
ಈ ಕುರಿತು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಪಿಎಂಸಿ ಅಧ್ಯಕ್ಷ ಬಿ.ಕೆ.ಈರಣ್ಣನವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಎಪಿಎಂಸಿ ಉಪಾಧ್ಯಕ್ಷ ಎಸ್.ಕೆ.ಚಂದ್ರಶೇಖರ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆಂದು ಅವರು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಎ.ಬಿ.ಅಲ್ಲಾಭಕ್ಷ್, ಹೆಚ್.ಡಿ.ನಾಗರಾಜ, ದಾದಾಪೀರ್, ಜಾಕೀರ್ ಬೇಗ್, ಅಲ್ತಾಫ್ ಖಾನ್, ನಜೀರ್ ಅಹ್ಮದ್ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ