ನ.29ರಂದು ಹರಿಹರದಲ್ಲಿ ದಿನೇಶ್ ಗುಂಡುರಾವ್ ಅವರಿಂದ ಸಂಘಟನಾ ಕಾರ್ಯಕ್ರಮ

ಹರಿಹರ :

       ನಗರದ ಮರಿಯ ಸದನದಲ್ಲಿ ನ.29ರ ಗುರುವಾರದಂದು ಸಂಘಟನಾ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಪ್ರದೇಶ ಕಾಂಗ್ರೇಸ್ ಅಧ್ಯಕ್ಷ ದಿನೇಶ್ ಗುಂಡುರಾವ್, ರಾಜ್ಯ ಯುವ ಅಧ್ಯಕ್ಷ ಬಸವನಗೌಡ ಬಾದರ್ಲಿ ಬಾಗವಹಿಸುತ್ತಿದ್ದು, ಶಾಸಕ ಎಸ್ ರಾಮಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

         ಈ ಕಾರ್ಯಕ್ರಮಕ್ಕೆ ಯುವ ಕಾಂಗ್ರೇಸ್, ಎನ್.ಎಸ್.ಯು.ಐ, ಎಸ್.ಸಿ/ಎಸ್.ಟಿ, ಮೈನಾರಿಟಿ, ಲೀಗಲ್ ಸೆಲ್, ಸೇವಾದಳ, ಮಹಿಳಾ ಕಾಂಗ್ರೇಸ್, ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ನಗರ ಸಭೆ ಮಾಜಿ ಮತ್ತು ಹಾಲಿ ಅಧ್ಯಕ್ಷರು, ಸದಸ್ಯರು ಹಾಗೂ ರೈತರು ಪಕ್ಷದ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಲ್.ಬಿ. ಹನುಮಂತಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ