ಬೆಂಗಳೂರು
ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆಗಳಲ್ಲಿ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರ ಜತೆ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುವುದಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಇಂದಿಲ್ಲಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಟ್ಟಾಗಿ ಸರ್ಕಾರ ರಚಿಸಿರುವ ನಾವು, ಚುನಾವಣೆಯನ್ನೂ ಸಹ ಒಮ್ಮತದಿಂದ ಎದುರಿಸುತ್ತೇವೆ. ಎಲ್ಲ ಕ್ಷೇತ್ರಗಳಲ್ಲಿ ಒಟ್ಟಾಗಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತೇವೆ. ನಾಮಪತ್ರಗಳ ಪರಿಶೀಲನೆ ನಡೆದ ಬಳಿಕ ಕ್ಷೇತ್ರಗಳಲ್ಲಿ ಪ್ರಚಾರ ಆರಂಭಿಸುತ್ತೇವೆ. ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೂ ಸಹ ಒಟ್ಟಿಗೆ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎಂದರು.
ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡು ಸರ್ಕಾರ ನಡೆಸಿರುವ ನಾವು ಈಗ ಉಪಚುನಾವಣೆಗೂ ಮೈತ್ರಿಯಾಗಿದ್ದು, ಒಟ್ಟಾಗಿಯೇ ಚುನಾವಣೆ ಎದುರಿಸುತ್ತೇವೆ ಎಂದು ಜೆಡಿಎಸ್? ವರಿಷ್ಠ ದೇವೇಗೌಡರು ತಿಳಿಸಿದರು.
ಈಗಾಗಲೇ ಮಂಡ್ಯ, ರಾಮನಗರ, ಶಿವಮೊಗ್ಗವನ್ನು ಜೆಡಿಎಸ್?ಗೆ ಬಿಟ್ಟುಕೊಡಲಾಗಿದ್ದು, ಬಳ್ಳಾರಿ, ಜಮಖಂಡಿಯಲ್ಲಿ ಕಾಂಗ್ರೆಸ್ ಬಲಿಷ್ಠವಾಗಿರುವುದರಿಂದ ಆ ಕ್ಷೇತ್ರಗಳನ್ನು ಬಿಟ್ಟುಕೊಡಲಾಗಿದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/10/Feature-image-HD-Deve-Gowda.gif)