ಹೆಚ್ 1 ಎನ್-1 ನಿಯಂತ್ರಣಕ್ಕೆ ಅಗತ್ಯ ಕ್ರಮ : ಶಿವಾನಂದಪಾಟೀಲ್

ಬೆಂಗಳೂರು

       ರಾಜ್ಯದಲ್ಲಿ ಹೆಚ್ 1 ಎನ್-1 ನಿಯಂತ್ರಣಕ್ಕೆ ಅಗತ್ಯವಾದ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಶಿವಾನಂದಪಾಟೀಲ್ ಹೇಳಿದರು.

        ಬೆಂಗಳೂರು ನಗರದಲ್ಲಿ ಹೆಚ್ 1 ಎನ್-1 ಹಾವಳಿ ಹೆಚ್ಚಾಗಿತ್ತು. ಈಗ ಅದು ನಿಯಂತ್ರಣಕ್ಕೆ ಬಂದಿದೆ. ಹೆಚ್ 1,ಎನ್-1 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎರಡು ಬಾರಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದ್ದೇನೆ ಎಂದು ಸುದ್ದಿಗಾರರಿಗೆ ತಿಳಿಸಿದರು.

        ಹೆಚ್ 1 ಎನ್-1 ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ರೋಗ ಹರಡದಂತೆ ಕಟ್ಟೆಚ್ಚರ ವಹಿಸಿರುವುದಾಗಿಯೂ ಅವರು ಹೇಳಿದರು.

       ಬೆಂಗಳೂರು ನಗರದಲ್ಲೂ ರೋಗ ನಿಯಂತ್ರಣಕ್ಕೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ಕ್ರಮಗಳನ್ನು ಜಾರಿಗೊಳಿಸುವಂತೆ ಸೂಚನೆ ನೀಡಿದ್ದಾರೆ. ರಾಜ್ಯದ ಎಲ್ಲಡೆ ಈಗ ರೋಗ ನಿಯಂತ್ರಣದಲ್ಲಿದೆ ಎಂದು ಅವರು ಹೇಳಿದರು.

         ಸಾಮಾನ್ಯವಾಗಿ ನವೆಂಬರ್ ಮುಗಿಯುತ್ತಿದ್ದಂತೆ ಹೆಚ್ 1 ಎನ್-1 ಹೆಚ್ ಪ್ರಮಾಣ ಇಳಿಮುಖವಾಗುತ್ತದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ರೋಗ ಹರಡುವಿಕೆ ಅಷ್ಟೊಂದು ವ್ಯಾಪಕವಾಗಿಲ್ಲ. ರಾಜ್ಯದಲ್ಲಿ ಇದುವರೆಗೂ 19 ಮಂದಿ ಹೆಚ್ 1 ಎನ್-1 ನಿಂದ ಮೃತಪಟ್ಟಿದ್ದಾರೆ ಎಂಬ ವರದಿಗಳು ಬಂದಿವೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷವೂ ಸಹ 17 ಮಂದಿ ಹೆಚ್ 1 ಎನ್-1 ಮೃತಪಟ್ಟಿದ್ದಾರೆ ಎಂದರು.

       ಹೆಚ್ 1 ಎನ್-1 ನಿಯಂತ್ರಣಕ್ಕೆ ಸಾರ್ವಜನಿಕರು ಕೈಜೋಡಿಸಬೇಕು. ರೋಗ ಲಕ್ಷಣಗಳು ಕಂಡು ಬಂದ ತಕ್ಷಣ ವೈದ್ಯರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆದುಕೊಂಡರೆ ಯಾವುದೇ ಸಮಸ್ಯೆ ಇರುವುದಿಲ್ಲ ಎಂದರು.

       ಹೆಚ್ 1 ಎನ್-1ಗೆ ಸಂಬಂಧಿಸಿದಂತೆ ಔಷಧಗಳನ್ನು ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಸಾಕಷ್ಟು ದಾಸ್ತಾನು ಇಡಲಾಗಿದೆ. ಔಷಧಿಯ ಕೊರತೆ ಇಲ್ಲ. ಜನ ರೋಗ ಲಕ್ಷಣ ಕಂಡ ತಕ್ಷಣ ಸರ್ಕಾರಿ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆಯಬೇಕು ಎಂದು ಅವರು ಮನವಿ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link