ಬಳ್ಳಾರಿ:
ರಾಜ್ಯದಲ್ಲಿ ಘೋಷಣೆಯಾಗಿರುವ ಉಪ ಚುನಾವಣೆಯ ಎಫೆಕ್ಟ್ ನಿಂದಾಗಿ ಈ ಬಾರಿಯ ಹಂಪಿ ಉತ್ಸವ ನವೆಂಬರ್ ನಲ್ಲಿ ನಡೆಯಬೇಕಿದ್ದ ಹಂಪಿ ಉತ್ಸವವನ್ನು ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಯುನೆಸ್ಕೋ ವಿಶ್ವ ಪರಂಪರೆ ಪಟ್ಟಿಯಲ್ಲಿರುವ ತಾಣವಾಗಿರುವ ಐತಿಹಾಸಿಕ ಪ್ರವಾಸಿ ತಾಣ ಹಂಪಿಯಲ್ಲಿ ನಡೆಯುವ ಉತ್ಸವ ವಾಡಿಕೆ ಪ್ರಕಾರ ಇದೇ ನವೆಂಬರ್ ತಿಂಗಳಲ್ಲಿ ನಡೆಯಬೇಕಿತ್ತು. ಆದರೆ ಉಪ ಚುನಾವಣೆ ಹಿನ್ನಲೆಯಲ್ಲಿ ಉತ್ಸವವನ್ನು ಮುಂದೂಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








