ಬೆಂಗಳೂರು
ಬೆಂಗಳೂರಿನ ಆರ್.ವಿ ರಸ್ತೆಯಿಂದ ಬೊಮ್ಮಸಂದ್ರ ಮಾರ್ಗದಲ್ಲಿ ನಮ್ಮ ಮೆಟ್ರೋ ಕಾಮಗಾರಿಗಾಗಿ ಗರ್ವೆಬಾವಿ ಪಾಳ್ಯದಲ್ಲಿರುವ ಆಂಜನೇಯ ದೇವಸ್ಥಾನವನ್ನು ನೆಲಸಮ ಮಾಡಲಾಗಿದೆ. ಪವನ ಪುತ್ರ ಹನುಮಂತ ಭಕ್ತರಿಗೆ ದರ್ಶನ ನೀಡುತ್ತಾ ಶಾಂತವಾಗಿ ನೆಲೆಸಿದ್ದನು. ಭಕ್ತರು ಕೂಡ 150 ವರ್ಷಗಳಿಂದ ಈ ಆಂಜನೇಯನನ್ನ ಆರಾಧಿಸಿಕೊಂಡು ಬರುತ್ತಿದ್ದಾರೆ. ಬೆಂಗಳೂರಿನ ಆರ್.ವಿ ರಸ್ತೆಯಿಂದ ಬೊಮ್ಮಸಂದ್ರ ಮಾರ್ಗದಲ್ಲಿ ನಮ್ಮ ಮೆಟ್ರೋ ಕಾಮಗಾರಿ ನಡೆಯುತ್ತಿದೆ.
ಗರ್ವೆಬಾವಿ ಪಾಳ್ಯ, ಬೊಮ್ಮನಹಳ್ಳಿ ಹಾಗೂ ರೂಪೇನ ಅಗ್ರಹಾರದಲ್ಲಿ ಮೂರು ಆಂಜನೇಯನ ಸನ್ನಿಧಿಗಳಿವೆ. ಈ ಮೂರು ಆಂಜನೇಯನ ಗುಡಿಯನ್ನ ಕೆಡವಲು ಬೆಂಗಳೂರು ಮೆಟ್ರೊ ರೈಲು ನಿಗಮ(ಬಿಎಂಆರ್‌ಸಿಎಲ್) ಯೋಜನೆ ರೂಪಿಸಿದೆ.ಗರ್ವೆಬಾವಿ ಪಾಳ್ಯದಲ್ಲಿರೋ ಆಂಜನೇಯನ ಗುಡಿ ಅತ್ಯಂತ ಪುರಾತನವಾಗಿದ್ದು, ಸರಿಸುಮಾರು 150 ವರ್ಷದಷ್ಟು ಹಳೆಯದು ಎನ್ನಲಾಗುತ್ತಿದೆ. ಅಲ್ಲದೆ ಈ ಹಿಂದೆ ಮೆಟ್ರೋ ಪ್ಲಾನ್ ಪ್ರಕಾರ ಗುಡಿ ತೆರವು ಮಾಡುವುದಿಲ್ಲ ಎಂದು ಮೆಟ್ರೋ ಅಭಯ ನೀಡಿತ್ತು. ಆದರೆ ಇದೀಗ ಏಕಾಏಕಿ ದೇವಸ್ಥಾನ ತೆರವುಗೊಳಿಸಿದ್ದಾರೆ.