ಸ್ವಪಕ್ಷದ ವಿರುದ್ಧವೇ ಹನುಮಂತಪ್ಪ ಮೌನ ಪ್ರತಿಭಟನೆ..!

ಬೆಂಗಳೂರು

    ಸ್ವಪಕ್ಷದ ವಿರುದ್ಧವೇ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ರಾಜ್ಯಸಭಾ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ಏಕಾಂಗಿಯಾಗಿ ಮೌನ ಪ್ರತಿಭಟನೆ ನಡೆಸಿದರು.ಇತ್ತೀಚೆಗೆ ಮೂಲ ಹಾಗೂ ವಲಸಿಗರ ಕಚ್ಚಾಟ, ತಿಕ್ಕಾಟದಿಂದಾಗಿ ಕಾಂಗ್ರೆಸ್ ನ ಶಕ್ತಿ ಕುಂದುತ್ತಿದೆ.ಇತ್ತೀಚೆಗೆ ಇದೇ ವಿಚಾರವಾಗಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಂಸದ ಕೆ.ಹೆಚ್.ಮುನಿಯಪ್ಪ ನಡುವೆ ಇದೇ ವಿಚಾರವಾಗಿ ನಡೆದಿದ್ದ ಶೀತಲ ಸಮರ ಬಹಿರಂಗವಾಗಿತ್ತು.

    ಕಾಂಗ್ರೆಸ್‍ನವರಿಗೆ ಕಾಂಗ್ರೆಸ್ ಉಳಿಸುವ ಒಳ್ಳೆಯ ಬುದ್ದಿ ಕೊಡು ಭಗವಂತಾ’ ಎಂದು ಹನುಮಂತಪ್ಪ ಭಾನುವಾರ ಕೆಪಿಸಿಸಿ ಕಚೇರಿ ಮುಂದೆ ಏಕಾಂಗಿಯಾಗಿ ಮೌನ ಪ್ರತಿಭಟನೆ ನಡೆಸಿದರು.

     ಅತ್ತ ಕೆಪಿಸಿಸಿಗೆ ಸಾರಥಿ ಹಾಗೂ ಪ್ರತಿಪಕ್ಷ ನಾಯಕರ ಆಯ್ಕೆಗಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದರೆ, ಇತ್ತ ಹನುಮಂತಪ್ಪ ಪಕ್ಷದಲ್ಲಿ ನಡೆಯುತ್ತಿರುವ ಮೂಲ ಹಾಗೂ ವಲಸಿಗ ಕಾಂಗ್ರೆಸ್ಸಿಗರು ಎಂಬ ಗುಂಪುಗಾರಿಕೆ, ಪ್ರತಿಪಕ್ಷದ ನಾಯಕನ ಆಯ್ಕೆ ಕುರಿತು ಹೈಕಮಾಂಡ್ ನಾಯಕರು ಅಭಿಪ್ರಾಯ ಸಂಗ್ರಹಿಸುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸಿ ಪ್ರತಿಭಟಿಸಿದರು.

     ಪ್ರತಿಪಕ್ಷವಾಗಿ ಕಾಂಗ್ರೆಸ್ ನಾಯಕರು ಒಗ್ಗಟ್ಟಿನಿಂದ ಹೋರಾಟ ನಡೆಸುವ ಬದಲು ಗುಂಪುಗಾರಿಕೆ ಮಾಡಿಕೊಂಡು ಅಧಿಕಾರಕ್ಕಾಗಿ ಪೈಪೋಟಿ ನಡೆಸುತ್ತಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಹಾನಿಯಾಗುತ್ತಿದ್ದು, ಈ ರೀತಿಯ ಬೆಳವಣಿಗೆಯಿಂದ ಪಕ್ಷದ ಭವಿಷ್ಯಕ್ಕೆ ಒಳ್ಳೆಯದಲ್ಲ. ಹೀಗಾಗಿ ಕಾಂಗ್ರೆಸ್‍ನವರಿಗೆ ಕಾಂಗ್ರೆಸ್ ಉಳಿಸುವ ಒಳ್ಳೆಯ ಬುದ್ದಿ ಕೊಡಲಿ ಎಂದು ಕೆಪಿಸಿಸಿ ಕಚೇರಿ ಬಾಗಿಲಿಗೆ ಬ್ಯಾನರ್ ಕಟ್ಟಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಮಾಹಿತಿ ಪಡೆದ ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಹಾಗೂ ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಕಚೇರಿಗೆ ಆಗಮಿಸಿ ಅವರಿಗೆ ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿದರು. ಅಲ್ಲದೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂಧನ್ ಮಿಸ್ತ್ರಿ, ಹನುಮಂತಪ್ಪ ಅವರಿಗೆ ದೂರವಾಣಿ ಮೂಲಕ ಮಾತನಾಡಿ, ತಾವು ಸಭೆ ನಡೆಸುತ್ತಿರುವ ಖಾಸಗಿ ಹೊಟೇಲ್‍ಗೆ ಅವರನ್ನು ಕರೆಸಿಕೊಂಡರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link