ಅಹ್ಮದಾಬಾದ್: 

ಇತ್ತೀಚೆಗಷ್ಟೆ ಕಾಂಗ್ರೆಸ್ ತೊರೆದಿದ್ದ ಅಲ್ಪೇಶ್ ಠಾಕೂರ್ ವಿರುದ್ಧ ವಾಕ್ ಪ್ರಹಾರ ನಡೆಸಿದ ಹಾರ್ದಿಕ್ ಪಟೇಲ್, ಕಾಂಗ್ರೆಸ್ ಪಕ್ಷ ಅವರಿಗೆ ನೀಡಿದ್ದ ಅಧಿಕಾರವನ್ನು ನಿರ್ವಹಿಸುವಲ್ಲಿ ಅಲ್ಪೇಶ್ ವಿಫಲರಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.
2017 ರ ಗುಜರಾತ್ ವಿಧಾನಸಭಾ ಚುನಾವಣೆ ವೇಳೆ ಅಲ್ಪೇಶ್ ಠಾಕೂರ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಇದೇ ವೇಳೆ ಬಿಜೆಪಿ ವಿರುದ್ಧವೂ ಹರಿಹಾಯ್ದಿರುವ ಹಾರ್ದಿಕ್ ಪಟೇಲ್, ತಮ್ಮನ್ನು ಲೋಕಸಭಾ ಚುನಾವಣೆಗೆ ಸ್ಪರ್ಧಿಸದಂತೆ ತಡೆಯುವುದಕ್ಕೆ ಬಿಜೆಪಿ ಎಲ್ಲಾ ರೀತಿಯ ಪ್ರಯತ್ನ ನಡೆಸುತ್ತಿದೆ ಎಂದು ಆರೋಪ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
