ಬೈಕ್‍ಗಳ ನಡುವೆ ಮುಖಾ-ಮುಖಿ ಢಿಕ್ಕಿ

0
14

ಹೊನ್ನಾಳಿ:

         ಬೈಕ್‍ಗಳು ಮುಖಾ-ಮುಖಿ ಢಿಕ್ಕಿಯಾದ ಪರಿಣಾಮ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಕೊನಾಯಕನಹಳ್ಳಿ ಗ್ರಾಮದ ಬಳಿ ಹೊನ್ನಾಳಿ-ತುಮ್ಮಿನಕಟ್ಟೆ ರಸ್ತೆಯಲ್ಲಿ ಸೋಮವಾರ ಸಂಭವಿಸಿದೆ.

     ರಟ್ಟೇಹಳ್ಳಿ ತಾಲೂಕಿನ ಚಿಕ್ಕಕಬ್ಬಾರ್ ಗ್ರಾಮದ ಬಸವರಾಜಪ್ಪ ದಾಸರ್(30) ಮೃತ ಬೈಕ್ ಸವಾರ. ಈತನಿಗೆ ಪತ್ನಿ, ಓರ್ವ ಪುತ್ರ ಮತ್ತು ಓರ್ವ ಪುತ್ರಿ ಇದ್ದಾರೆ.

         ಹೊನ್ನಾಳಿಯಿಂದ ತನ್ನ ಸ್ವ-ಗ್ರಾಮ ರಟ್ಟೇಹಳ್ಳಿ ತಾಲೂಕಿನ ಚಿಕ್ಕಕಬ್ಬಾರ್ ಗ್ರಾಮಕ್ಕೆ ಬೈಕ್‍ನಲ್ಲಿ ತೆರಳುತ್ತಿದ್ದ ಬಸವರಾಜಪ್ಪ ದಾಸರ್‍ಗೆ ಸೇರಿದ ಬೈಕ್‍ಗೆ ಹರಿಹರ ತಾಲೂಕಿನ ಉಕ್ಕಡಗಾತ್ರಿ ಗ್ರಾಮದಿಂದ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರಕ್ಕೆ ತೆರಳುತ್ತಿದ್ದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಇನ್ನೊಂದು ಬೈಕ್‍ನಲ್ಲಿದ್ದ ಮೂವರಿಗೂ ಗಾಯಗಳಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೊನ್ನಾಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

LEAVE A REPLY

Please enter your comment!
Please enter your name here