ಹುಳಿಯಾರು
ಹುಳಿಯಾರು ಹೋಬಳಿಯ ದಸೂಡಿ ಗ್ರಾಮದಲ್ಲಿ ಬೀದಿ ನಾಟಕದ ಮೂಲಕ ಆರೋಗ್ಯ ಬಗ್ಗೆ ಅರಿವು ಮೂಡಿಸಲಾಯಿತು.ಆರೋಗ್ಯ ಇಲಾಖೆ ವತಿಯಿಂದ ಭೂಮಿ ಗೀತಾ ಕಲಾ ತಂಡದ ಕಲಾವಿದರು ಪರಿಸರ ಸಂರಕ್ಷಣೆ, ಎಚ್1-ಎನ್1 ಮತ್ತು ಶುದ್ಧ ಕುಡಿಯುವ ನೀರಿನ ಬಗ್ಗೆ ಹಾಗೂ ಡೆಂಗ್ಯೂ, ಚಿಕನ್‍ಗುನ್ಯಾ, ಕ್ಯಾನ್ಸರ್, ಕ್ಷಯಾ, ಮಲೇರಿಯಾ ರೋಗಗಳ ಬಗ್ಗೆ ನಾಟಕದ ಮೂಲಕ ಮಾಹಿತಿ ನೀಡುವ ಮೂಲಕ ಜನರಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸಿದರು.
ಹಿರಿಯ ಆರೋಗ್ಯ ಸಹಾಯಕರಾದ ಸಿ.ವಿ.ವೆಂಕಟರಾಮಯ್ಯ ಮಾತನಾಡಿ ಆರೋಗ್ಯ ಇಲಾಖೆಯಿಂದ ನಡೆಯುತ್ತಿರುವ ಈ ಕಾರ್ಯಕ್ರಮ ಜನರಿಗೆ ಬಹಳ ಉಪಯುಕ್ತವಾದುದು ಮತ್ತು ಇದರ ಸದುಪಯೋಗಪಡೆಯುವಂತೆ ಮನವಿ ಮಾಡಿದರು.
ಈ ಕಾರ್ಯಕ್ರಮವನ್ನು ದಸೂಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ಜಯಪ್ರಾಕಾಶ್ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಆಸ್ಪತ್ರೆ ಸಿಬ್ಬಂದಿಗಳಾದ ಸುವರ್ಣಮ್ಮ, ಜ್ಞಾನೇಶ್ವರಿ, ನಳಿನಾ, ನಾಗರತ್ನ ಹಾಗೂ ಆಶಾ ಕಾರ್ಯಕರ್ತೆಯರು ಹಾಗೂ ದಸೂಡಿ ಸುತ್ತಮತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ