ಬೆಂಗಳೂರು :
ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚ್ಉತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರಿ ವೈದ್ಯರ ಸಂಘ ದೊಡ್ಡ ಶಾಕ್ ನೀಡಿದೆ. ಈ ಮೂಲಕ ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಎದುರಿಸಬೇಕಾದ ಸನ್ನಿವೇಶ ಬರುತ್ತಾ ಎಂಬ ಪ್ರಶ್ನೆ ಮೂಡಿದೆ.
ಈಗಾಗಲೇ ರಾಜ್ಯ ಸರ್ಕಾರಿ ವೈದ್ಯರ ಸಂಘ ಸರ್ಕಾರಕ್ಕೆ ಹಲವು ಬೇಡಿಕೆಗಳನ್ನು ಇಟ್ಟು ಮನವಿ ಮಾಡಿದ್ದರು, ಆದರೆ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬರದ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಆರೋಗ್ಯ ಸೇವೆಯಲ್ಲಿ ಕೆಲಸಗಳಲ್ಲಿ ತೊಡಗಿಕೊಳ್ಳದಿರಲು ವೈದ್ಯರು ನಿರ್ಧಾರ ಮಾಡಿದ್ದಾರೆ ಮಂಗಳವಾರದಿಂದ ಕೊರೊನಾ ವರದಿ ಸೇರಿದಂತೆ ಯಾವುದೇ ಹೆಲ್ತ್ ರಿಪೋರ್ಟ್ ಸಿಗೋದು ಅನುಮಾನವಾಗಿದೆ.. ಈ ಸಂಬಂಧ ಸರ್ಕಾರಿ ವೈದ್ಯರ ಸಂಘ ಮಹತ್ವದ ನಿರ್ಧಾರ ತೆಗೆದುಕೊಂಡಿದೆ ಎಂಬುದಾಗಿ ಕೇಳಿ ಬರುತ್ತಿದೆ.
ಹೆಲ್ತ್ ರಿಪೋರ್ಟ್ ನೀಡದೇ ಆಸ್ಪತ್ರೆಗಳನ್ನ ಕ್ಲೋಸ್ ಮಾಡಲು ರಾಜ್ಯ ಸರ್ಕಾರಿ ವೈದ್ಯರ ಸಂಘದಿಂದ ದಿಟ್ಟ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಷ್ಟ್ರೀಯ ಕಾರ್ಯಕ್ರಮಗಳ ವರದಿಗಳನ್ನ ಹಾಗೂ ಮಲೇರಿಯಾ, ಜಂತುಹುಳು, ಕುಷ್ಟರೋಗ ಸೇರಿದಂತೆ ಇನ್ನಿತರ ವರದಿಗಳನ್ನ ಸರ್ಕಾರಕ್ಕೆ ವರದಿಗಳನ್ನ ಸಲ್ಲಿಸದಿರಲು ನಿರ್ಧಾರ ಮಾಡಲಾಗಿದೆ. ಅಲ್ಲದೆ ಡಿಸಿ ಮತ್ತು ಸಿಇಓ ಮೀಟಿಂಗ್ ಗಳಲ್ಲೂ ಸಹ ಭಾಗವಹಿಸದಿರಲು ನಿರ್ಧರಿಸಲಾಗಿದೆ.
ಯಾವುದೇ ಆನ್ ಲೈನ್ ಆಗಿಲಿ ಆಫ್ ಲೈನ್ ಆಗಲಿ ವರದಿಗಳನ್ನ ಸರ್ಕಾರಕ್ಕೆ ನೀಡದೇ ವೈದ್ಯರ ಸಂಘ ಪ್ರತಿಭಟನೆ ನಡೆಸಲಿದೆ ಎನ್ನಲಾಗಿದೆ. ಇನ್ನೂ ಸೆಪ್ಟಂಬರ್ 15ರಿಂದ ಪ್ರತಿಭಟನೆ ನಡೆಸಲಿದೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
