ತುಮಕೂರು
ತುಮಕೂರು ವಿಶ್ವವಿದ್ಯಾನಿಲಯದ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
ಶಿಬಿರ ಉದ್ಘಾಟಿಸಿದ ಕುಲಪತಿ ಪ್ರೊ. ವೈ.ಎಸ್. ಸಿದ್ಧೇಗೌಡರು, ವಿಶ್ವವಿದ್ಯಾನಿಲಯದ ಸರ್ವಾಂಗೀಣಅಭಿವೃದ್ದಿಗೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಆರೋಗ್ಯ ಅತಿಮುಖ್ಯ. ಆರೋಗ್ಯ ತಪಾಸಣಾ ಶಿಬಿರದಂತಹ ಕಾರ್ಯಕ್ರಮಗಳು ಮಹತ್ತರ ಪಾತ್ರವಹಿಸುತ್ತವೆ ಎಂದು ತಿಳಿಸಿದರು.
ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ಕೇವಲ ಬೋಧನೆಗೆ ಸೀಮಿತವಾಗಿರದೆ, ವಿಸ್ತರಣಾ ಚಟುವಟಿಕೆಗಳಡಿಯಲ್ಲಿ ವಿನೂತನ ಕಾರ್ಯಕ್ರಮಗಳೊಂದಿಗೆ ಸಮುದಾಯದ ಎಲ್ಲರಿಗೂ ತಲುಪುವಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಶ್ಲಾಘಿಸಿದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳಾದ ಡಾ.ಜಿ.ಕೆ. ಸನತ್ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಏಡ್ಸ್ ನಿಯಂತ್ರಣ ಘಟಕವು ಅನೇಕ ವರ್ಷಗಳಿಂದ ರೆಡ್ರಿಬ್ಬನ್ ಕ್ಲಬ್ ಘಟಕಗಳಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರವನ್ನು ಆಯೋಜಿಸುತ್ತಾ ಬಂದಿದ್ದು, ಇದರ ಸದುಪಯೋಗವನ್ನು ಪಡೆದು ಆರೋಗ್ಯವಂತರಾಗಲು ತಿಳಿಸಿದರು. ಯುವಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಜೀವರಕ್ಷಿಸಬೇಕೆಂದು ಕೋರಿದರು.
ಶ್ರೀ ಸಿದ್ಧಾರ್ಥ ವೈದ್ಯಕೀಯ ಮಹಾವಿದ್ಯಾಲಯದ ಪ್ರೊ. ಕೃಷ್ಣ ಅಯ್ಯಂಗಾರ್, ಸಮಾಜಕಾರ್ಯಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕರಾದ ಪರಶುರಾಮ ಕೆ ಜಿ, ಡಾ. ಲೋಕೇಶ್ಎಂ.ಯು, ಡಾ. ಬಿ.ಪಿ.ಶಿವಲಿಂಗಪ್ಪ, ಶ್ರೀ ಶಶಿಕಾಂತರಾವ್, ಭೂಷಣ್ಕುಮಾರ್, ಡಾ. ಸುಜಾತ ಎಂ, ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು. ಶಿಬಿರದಲ್ಲಿ ಸುಮಾರು 300ಕ್ಕೂ ಅಧಿಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಉಚಿತವಾಗಿ ವೈದ್ಯಕೀಯ ತಪಾಸಣೆ ನಡೆಸಿ, ಔಷಧೋಪಚಾರ ನೀಡಿ, ಹೆಚ್ಚಿನಚಿಕಿತ್ಸೆಯ ಅಗತ್ಯವಿರುವವರಿಗೆ ನುರಿತ ವೈದ್ಯರನ್ನು ಸಂಪರ್ಕಿಸಲು ಸೂಚಿಸಲಾಯಿತು.
ತುಮಕೂರು ವಿಶ್ವವಿದ್ಯಾನಿಲಯದ ಮಾನ್ಯ ಕುಲಪತಿಗಳಾದ ಪ್ರೊ.ವೈ.ಎಸ್. ಸಿದ್ಧೇಗೌಡರವರು,ಸೆರಾಜೇ ಮೊನಾಸ್ಟಿಕ್ ವಿಶ್ವವಿದ್ಯಾನಿಲಯದಪ್ರಧಾನ ಕಾರ್ಯದರ್ಶಿಗಳಾದ ಗೆಶೆ ನವಾಂಗ್ಜಾಂಗ್ಪೋ, ಡಾ.ಜಿ.ಕೆ. ಸನತ್ಕುಮಾರ್,ಜಿಲ್ಲಾಏಡ್ಸ್ ನಿಯಂತ್ರಣಾ ಧಿಕಾರಿಗಳು ಪ್ರೊ.ಕೃಷ್ಣ ಅಯ್ಯಂಗಾರ್, ಶ್ರೀ ಸಿದ್ಧಾರ್ಥ ವೈದ್ಯಕೀಯ ಮಹಾ ವಿದ್ಯಾಲಯರವರು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








