ಹಿರಿಯೂರು :
ತಾಲ್ಲೂಕು ಕಛೇರಿಯಲ್ಲಿ ಆಧಾರ್ ಕಾರ್ಡ್ ಮಾಡಿಸಿಕೊಳ್ಳಲು ನೂಕುನುಗ್ಗಲು ಉಂಟಾಗಿದ್ದು, ಈ ಅವ್ಯವಸ್ಥೆಯನ್ನು ಸರಿಪಡಿಸುವಲ್ಲಿ ತಾಲ್ಲೂಕು ಆಡಳಿತ ಸಂಪೂರ್ಣ ವಿಫಲವಾಗಿದೆ ಎಂಬುದಾಗಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಧಾರ್ ಕಾರ್ಡ್ ಮಾಡಿಸಿಕೊಳ್ಳಲು ನಗರದ ತಾಲ್ಲೂಕು ಕಚೇರಿಗೆ ಪದೇಪದೇ ಅಲೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ತಾಲ್ಲೂಕಿನಲ್ಲಿ ಗ್ರಾಮೀಣ ಪ್ರದೇಶದಿಂದ ಹಾಗೂ ನಗರದಿಂದ ಅನೇಕ ನಾಗರೀಕರು, ಮಹಿಳೆಯರೂ ಮಕ್ಕಳೂ, ತಮ್ಮ ದೈನಂದಿನ ಕೆಲಸ ಕಾರ್ಯಗಳನ್ನು ಬಿಟ್ಟು ತಾಲ್ಲೂಕು ಕಚೇರಿಗೆ ಅಲೆಯಬೇಕಿದೆ ಎಂಬುದಾಗಿ ಸಾರ್ವಜನಿಕರು ದೂರಿದ್ದಾರೆ.
ಅಲ್ಲದೆ ಸಾರ್ವಜನಿಕರು ಹಾಗೂ ಮಹಿಳೆಯರು ತಮ್ಮ ಮಕ್ಕಳು ಮರಿಗಳನ್ನು ಕಟ್ಟಿಕೊಂಡು ಬೆಳ್ಳಂಬೆಳಿಗ್ಗೆಯೇ ತಾಲ್ಲೂಕು ಕಛೇರಿ ಮುಂದೆ ಕ್ಯೂ ನಿಲ್ಲಬೇಕಾದ ಪರಿಸ್ಥಿತಿ ಎದುರಾಗಿದ್ದು, ಪ್ರತಿದಿನ ಸಂಜೆಯವರೆಗೂ ಮಕ್ಕಳು ಮರಿಗಳೊಂದಿಗೆ ತಾಲ್ಲೂಕು ಕಚೇರಿಮುಂದೆ ಕಾಯಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ.ಆದ್ದರಿಂದ ಕ್ಷೇತ್ರದ ಶಾಸಕರು ಈ ಕೂಡಲೇ ಇತ್ತ ಗಮನ ಹರಿಸಿ ಈ ಅವ್ಯವಸ್ಥೆ ಸರಿಪಡಿಸಬೇಕು ಎಂಬುದಾಗಿ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ